ಹಾವೇರಿ: ಸತತ 15 ವರ್ಷ ನೀವು ನನಗೆ ಆಶೀರ್ವಾದ ಮಾಡಿದ್ದೀರಿ. ನಮ್ಮ ನಿಮ್ಮ ನಡುವೆ ಬೇರೆ ಯಾವುದೇ ಶಕ್ತಿ ಬರಲು ಸಾಧ್ಯವಿಲ್ಲ. ಶಿಗ್ಗಾಂವಿ ಕ್ಷೇತ್ರದ ಜನರ ಪ್ರೀತಿಗೆ ನಾನು ಸೋತಿದ್ದೇನೆ. ಶಿಗ್ಗಾಂವಿ ಕ್ಷೇತ್ರದಲ್ಲಿ 100ಕ್ಕೂ ಹೆಚ್ಚು ಕೆರೆಗಳನ್ನು ತುಂಬಿಸಿದ್ದೇನೆ. ರಾಜ್ಯದಲ್ಲಿ 125ಕ್ಕಿಂತ ಹೆಚ್ಚು ಸ್ಥಾನ ಪಡೆದು ಅಧಿಕಾರಕ್ಕೆ ಬರುತ್ತೇವೆ.
ನಾನು ಸಿಎಂ ಆಗಿ ವಿದ್ಯಾರ್ಥಿಗಳು, ರೈತರಿಗಾಗಿ ಯೋಜನೆ ಜಾರಿ ಮಾಡಿದ್ದೇನೆ ಎಂದು ಬಿಜೆಪಿ ಸಮಾವೇಶದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.