ಹಾವೇರಿ: ವಿಧಾನಸಭೆ ಚುನಾವಣೆಗೆ ಮುಖ್ಯಮಂತ್ರಿ ಬಸವರಾಜ್ ಬೋಮ್ಮಾಯಿಯವರು ನಾಮ ಪತ್ರ ಸಲ್ಲಿಕೆಗೆ ಹೊಗುತ್ತಿದ್ದಾರೆ. ಇವರ ನಾಮಪತ್ರ ಸಲ್ಲಿಕೆ ಕೆವಲ ಶಾಸಕ ಸ್ಥಾನಕ್ಕಾಗಿ ಅಲ್ಲ. ಈ ರಾಜ್ಯವನ್ನು ಹೊಸ ದಿಕ್ಕಿಗೆ ಒಯ್ಯುವ ಕಾರ್ಯ ಆಗಲಿದೆ. ನಿಮ್ಮಲ್ಲಿರುವ ಆತ್ಮ ವಿಶ್ವಾಸ, ಉತ್ಸಾಹ ನೋಡಿದರೇ ಬೊಮ್ಮಾಯಿ ಅವರಿಗೆ ಮುಂದಿನ ಐದು ವರ್ಷಗಳ ಕಾಲ ಮತ್ತೆ ಅವಕಾಶ ಸಿಗಲಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಹೇಳುವ ಮೂಲಕ ಪರೋಕ್ಷವಾಗಿ ಬಸವರಾಜ ಬೊಮ್ಮಾಯಿ ಮತ್ತೆ ಸಿಎಂ ಆಗುವ ಸುಳಿವು ನೀಡಿದ್ದಾರೆ.
ಶಿಗ್ಗಾಂವಿಯಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ಅಂದ್ರೆ ಕಮಿಷನ್. ಕಾಂಗ್ರೆಸ್ ಅಂದ್ರೆ ಭ್ರಷ್ಟಾಚಾರ. ಕಾಂಗ್ರೆಸ್ ನಾಯಕರು ಎಟಿಎಂ ಇದ್ದಂತೆ. ವಂದೇ ಭಾರತ ರೈಲು ಇಲ್ಲಿ ಓಡಾಡುತ್ತಿದೆ. ರಾಜ್ಯದಲ್ಲಿ ಅನೇಕ ಹೊಸ ರೈಲುಗಳು ಸಂಚಾರ ಮಾಡುತ್ತಿವೆ. ರಾಜ್ಯದಲ್ಲಿ ರೈಲು ಸಂಚಾರಗಳ ಸಂಖ್ಯೆ ಹೆಚ್ಚಿಗೆ ಆಗಬೇಕಾದರೇ ಬಿಜೆಪಿಗೆ ಮತ ಕೊಡಿ. ಆಯುಷ್ಮಾನ ಭಾರತ ಯೋಜನೆಯಿಂದ ಬಡವರಿಗೆ ಅನಕೂಲ ಆಗುತ್ತಿದೆ. ಈ ಯೋಜನೆ ಮುಂದುವರೆಯಲು ಬಿಜೆಪಿ ಮತ ಹಾಕಿ. ಸಿದ್ದರಾಮಯ್ಯ ಪಿಎಫ್ಐ ಬ್ಯಾನ್ ಮಾಡಿದ್ದನ್ನು ಹಿಂಪಡೆಯುತ್ತೆವೆ ಎಂದು ಹೇಳುತ್ತಿದ್ದಾರೆ. ಪಿಎಫ್ಐ ಬ್ಯಾನ್ ಮಾಡಿದ್ದರಿಂದ ರಾಜ್ಯದಲ್ಲಿ ಕ್ರೈಮ್ ಸಂಖ್ಯೆ ಕಡಿಮೆ ಆಗಿದೆ. ಬೊಮ್ಮಾಯಿಯವರಿಂದ ರಾಜ್ಯದಲ್ಲಿ ಅಪರಾಧ ಸಂಖ್ಯೆ ಕಡಿಮೆ ಆಗಿದೆ. ಇಂದು ರಾಜ್ಯದಲ್ಲಿನ ಅನೇಕ ಕ್ರಿಮಿನಲ್ಗಳು ಜೈಲಿನಲ್ಲಿದ್ದಾರೆ ಎಂದು ಬೊಮ್ಮಾಯಿ ಸರ್ಕಾರವನ್ನು ಹಾಡಿ ಹೊಗಳಿದರು.