ಕೂಗು ನಿಮ್ಮದು ಧ್ವನಿ ನಮ್ಮದು

ಇಂದು ಸಚಿವ ಸಂಪುಟ ಸಭೆ ಕರೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಮಹತ್ವದ ಯೋಜನೆಗಳಾದ 5 ಗ್ಯಾರೆಂಟಿಗಳು ಇಂದು ಜಾರಿಯಾಗುವ ಸಾಧ್ಯತೆ ಇದೆ. ಈ ಸಂಬಂಧ ಇಂದು ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದ್ದು, ಇವತ್ತಿನ ಸಭೆಯಲ್ಲೇ ಐದು ಗ್ಯಾರಂಟಿಗಳಿಗೆ ಅಂತಿಮ ಮುದ್ರೆ ಬೀಳಲಿದೆ. ಖುದ್ದು ಸಿಎಂ ಸಿದ್ದರಾಮಯ್ಯ ಕ್ಯಾಬಿನೆಟ್ ಬಳಿಕ ಗ್ಯಾರಂಟಿ ಘೋಷಣೆಗೆ ಸಜ್ಜಾಗಿದ್ದಾರೆ. ಸಿಎಂ ಸಿದ್ದರಾಮಯ್ಯ ಎಲ್ಲಾ ಇಲಾಖೆ ಜತೆ ಸಭೆ ನಡೆಸಿದ್ದು, ಅಂತಿಮ ನಿರ್ಧಾರಕ್ಕೆ ಬಂದಿದ್ದಾರೆ. ರಾಜ್ಯದ ಜನರಿಗೆ ಫ್ರೀ ಗಿಫ್ಟ್‌ ಕೊಡಲು ತೀರ್ಮಾನಿಸಿದ್ದಾರೆ. ಅದಕ್ಕಾಗಿ ಇಂದು ಬೆಳಗ್ಗೆ 11 ಗಂಟೆಗೆ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದೆ.

ಐದು ಗ್ಯಾರಂಟಿ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಪ್ರಚಂಡ ಗೆಲುವು ನೀಡಿವೆ. ಇಡೀ ರಾಜ್ಯಕ್ಕೆ ರಾಜ್ಯವೇ ಎದುರು ನೋಡುತ್ತಿರುವ ಗ್ಯಾರಂಟಿ, ಹಾದಿ ಬೀದಿಯಲ್ಲಿ ಚರ್ಚೆ ಆಗುತ್ತಿವೆ. ಇದೀಗ ಇದೇ ಗ್ಯಾರಂಟಿ ಘೋಷಣೆಗೆ ಕ್ಷಣಗಣನೆ ಶುರುವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಇಂದು ಸಭೆ ನಡೆಯಲಿದೆ. ಸಭೆ ಬಳಿಕ ಯೋಜನೆಗಳು ಜಾರಿಯಾಗುವ ಸಾಧ್ಯತೆ ಇದೆ. ಇನ್ನು ರಾಜ್ಯದಲ್ಲಿ ಮಳೆ-ಬಿಸಿಲಿನ ಆಟ ಜೋರಾಗಿಯೇ ನಡೆಯುತ್ತಿದೆ. ಕೆಲವು ಜಿಲ್ಲೆಗಳಲ್ಲಿ ವಿಪರೀತ ಮಳೆಯಾದರೇ ಇನ್ನು ಕೆಲವು ಕಡೆ ಬಿರಿ ಬಿರಿ ಬಿಸಿಲು ಜನರನ್ನು ಬಾದಿಸುತ್ತಿದೆ.

error: Content is protected !!