ಕೂಗು ನಿಮ್ಮದು ಧ್ವನಿ ನಮ್ಮದು

ಹೊರ ರಾಜ್ಯಗಳಿಂದ ಅಕ್ಕಿ ಖರೀದಿ ವಿಚಾರ: ಆಹಾರ ಇಲಾಖೆ ಅಧಿಕಾರಿಗಳೊಂದಿಗೆ ಸಿಎಂ ಸಭೆ

ಬೆಂಗಳೂರು: ಅನ್ನಭಾಗ್ಯ ಯೋಜನೆಗಾಗಿ ಹೊರ ರಾಜ್ಯಗಳಿಂದ ಅಕ್ಕಿ ಖರೀದಿ ವಿಚಾರವಾಗಿ ಆಹಾರ ಇಲಾಖೆ ಅಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ಸಂಜೆ 5.30ಕ್ಕೆ ಬೆಂಗಳೂರಿನ ಶಕ್ತಿಭವನದಲ್ಲಿ ಸಭೆ ನಡೆಸಲಿದ್ದಾರೆ. ಸಿಎಂ ಸಿದ್ದರಾಮಯ್ಯ ಈಗಾಗಲೇ ಅಧಿಕಾರಿಗಳಿಂದ ಪ್ರಾಥಮಿಕ ಮಾಹಿತಿ ಪಡೆದಿದ್ಧಾರೆ.

ಸಭೆಯಲ್ಲಿ ಆಹಾರ ಸಚಿವ ಕೆ.ಎಚ್.ಮುನಿಯಪ್ಪ, ಆಹಾರ ಇಲಾಖೆ ಪ್ರಧಾನ ಕಾರ್ಯದರ್ಶಿ, ಇತರೆ ಅಧಿಕಾರಿಗಳು ಭಾಗಿಯಾಗಲಿದ್ದಾರೆ

error: Content is protected !!