ಶಿವಮೊಗ್ಗ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಇಂದು ಸೋಗಾನೆಯಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಪ್ರಗತಿ ಪರಿಶೀಲನೆ ನಡೆಸಿದರು. ಈ ವೇಳೆ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ, ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ಶಾಸಕರಾದ ಅಶೋಕ ನಾಯ್ಕ್, ಅರಗ ಜ್ಞಾನೇಂದ್ರ, ರುದ್ರೇಗೌಡ, ಆರ್ಯವೈಶ್ಯ ನಿಗಮ ಅಧ್ಯಕ್ಷ ಡಿ.ಎಸ್.ಅರುಣ್, ಮೇಯರ್ ಸುನಿತಾ ಅಣ್ಣಪ್ಪ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೆಲ್ವಕುಮಾರ್, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಮತ್ತಿತರರು ಉಪಸ್ಥಿತರಿದ್ದರು.