ಕೂಗು ನಿಮ್ಮದು ಧ್ವನಿ ನಮ್ಮದು

ಎರಡು ಕಾರುಗಳ ಮಧ್ಯೆ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ದಂಪತಿ ಸಾವು

ತುಮಕೂರು: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಸ್ಥಳದಲ್ಲೇ ದಂಪತಿ ಸಾವನ್ನಪ್ಪಿದ್ದಾರೆ. ತುಮಕೂರು ಹೊರವಲಯದ ನಾಮದಚಿಲುಮೆ ರಸ್ತೆಯ ಸಿದ್ದಗಂಗಾ ಕ್ರಾಸ್ ಬಳಿ ಭೀಕರ ಅಪಘಾತ ನಡೆದಿದೆ.

ಮೃತರು ಕೊರಟಗೆರೆ ತಾಲ್ಲೂಕಿನ ಇರಕಸಂದ್ರ ಕಾಲೋನಿ ಮೂಲದ ದಂಪತಿಗಳಾಗಿದ್ದಾರೆ. ಓಮಿನಿ ಕಾರಿನಲ್ಲಿದ್ದ ದಂಪತಿ ಸಾವಿಗಿಡಾಗಿದ್ದು, ಭಜರಂಗದಳ ಜಿಲ್ಲಾ ಸಂಚಾಲಕ ಮಂಜು ಭಾರ್ಗವ್ ಗೆ ಸೇರಿದ ಕಾರು ಹಾಗೂ ಓಮಿನಿ ನಡುವೆ ಅಪಘಾತವಾಗಿದೆ.

ಮಂಜು ಭಾರ್ಗವ್ ಗೆ ಗಂಭೀರ ಗಾಯಗಳಾಗಿದ್ದು, ಬೆಂಗಳೂರಿನ ನಿಮ್ಹಾನ್ಸ್ ಗೆ ರವಾನೆ ಮಾಡಲಾಗಿದೆ. ಅಪಘಾತಕ್ಕೆ ಕಾರುಗಳೆರಡು ಅತಿವೇಗದಲ್ಲಿದ್ದುದು ಕಾರಣವಾಗಿದ್ದು, ಕಾರುಗಳು ಮುಖಾಮುಖಿ ಡಿಕ್ಕಿಯಾಗಿವೆ.

ಸ್ಥಳಕ್ಕೆ ಕ್ಯಾತ್ಸಂದ್ರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕ್ಯಾತ್ಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

error: Content is protected !!