ಬೆಂಗಳೂರು: ಇಂದು (ಏ.18) ಕಾಂಗ್ರೆಸ್ ಅಭ್ಯರ್ಥಿಗಳ 4ನೇ ಪಟ್ಟಿ ಬಿಡುಗಡೆ ಸಾಧ್ಯತೆ ಇದ್ದು, 15 ಕ್ಷೇತ್ರಗಳ ಪೈಕಿ 10 ಕ್ಷೇತ್ರಗಳಿಗೆ ಟಿಕೆಟ್ ಘೋಷಣೆಯಾಗಬಹದು. ಉಳಿದ ಕ್ಷೇತ್ರಗಳಿಗೆ ಮೌಖಿಕವಾಗಿ ಅಭ್ಯರ್ಥಿಗಳಿಗೆ ಸೂಚನೆ ನೀಡಲಾಗುತ್ತದೆ ಎಂದು ಹೇಳಲಾಗುತ್ತಿದೆ. ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಸಂಚಲನ ಮೂಡುತ್ತಿದ್ದು, ಎರಡು ರಾಷ್ಟ್ರೀಯ ಪಕ್ಷಗಳು ಪ್ರಬಲ ಲಿಂಗಾಯತ ಸಮುದಾಯದ ಜಪ ಮಾಡುತ್ತಿವೆ. ವಿಧಾನಸಭೆ ಚುನಾವಣೆ ಸಂಬಂಧ ಬಿಜೆಪಿ 224 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ.
ಇದರಲ್ಲಿ ಪ್ರಮುಖವಾಗಿ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ಹಾಲಿ ಶಾಸಕ ರಾಮದಾಸ್ ಮತ್ತು ರಘುಪತಿ ಭಟ್ ಅವರಿಗೆ ಟಿಕೆಟ್ ಕೈ ತಪ್ಪಿದೆ. ಲಕ್ಷ್ಮಣ ಸವದಿ ಮತ್ತು ಜಗದೀಶ್ ಶೆಟ್ಟರ್ ಬಂಡಾಯವೆದ್ದು, ಕಾಂಗ್ರೆಸ್ ಸೇರಿದ್ದಾರೆ. ಲಿಂಗಾಯತ ಸಮುದಾಯದ ಪ್ರಬಲ ಮುಖಂಡರು ಕಾಂಗ್ರೆಸ್ ಸೇರಿದ್ದು ಪಕ್ಷಕ್ಕೆ ಪ್ಲಸ್ ಆದ್ರೆ ಬಿಜೆಪಿಗೆ ಮೈನಸ್ ಆಗಿದೆ. ಇನ್ನು ಪುಲಕೇಶಿ ನಗರ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಮಿಸ್ ಆಗಿದ್ದಕ್ಕೆ ಬಂಡಾಯವೆದ್ದ ಅಖಂಡ ಶ್ರೀನಿವಾಸ ಮೂರ್ತಿ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿ, ಪಕ್ಷೇತರನಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಇನ್ನು ರಾಜ್ಯಾದ್ಯಂತ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದು, ಇಂದು ಕೂಡ ಹಲವರು ಸಲ್ಲಿಸಲಿದ್ದಾರೆ.