ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಯಲ್ಲಿ 15,754 ಕೋವಿಡ್ 19 ಸೋಂಕು ಪ್ರಕರಣ ಪತ್ತೆಯಾಗಿದ್ದು, ಇದರೊಂದಿಗೆ ದೇಶಾದ್ಯಂತ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,43,14,618ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ (ಆಗಸ್ಟ್ 19) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಲಾಗಿದೆ.
ದೇಶದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 1,01,830ಕ್ಕೆ ಏರಿಕೆಯಾಗಿದೆ. 24ಗಂಟೆಯಲ್ಲಿ 47 ಮಂದಿ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಭಾರತದಾದ್ಯಂತ ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,27,253ಕ್ಕೆ ತಲುಪಿದೆ ಎಂದು ಅಂಕಿಅಂಶ ತಿಳಿಸಿದೆ.
ಭಾರತದಲ್ಲಿನ ಕೋವಿಡ್ 19 ಚೇತರಿಕೆ ದರ ಶೇ.98.58ರಷ್ಟಿದೆ. ಒಂದೇ ದಿನದಲ್ಲಿ 487 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ. ಪ್ರತಿದಿನದ ಪಾಸಿಟಿವಿಟಿ ದರ ಶೇ.3.47ರಷ್ಟಿದ್ದು, ವಾರದ ಪಾಸಿಟಿವಿಟಿ ದರ ಶೇ.3.90ರಷ್ಟಿದೆ. ದೇಶಾದ್ಯಂತ ಕೋವಿಡ್ 19 ಸೋಂಕಿನಿಂದ ಚೇತರಿಸಿಕೊಂಡವರ ಒಟ್ಟು ಸಂಖ್ಯೆ 4,36,85,535ಕ್ಕೆ ತಲುಪಿದೆ. ಅಲ್ಲದೇ ಭಾರತದಲ್ಲಿನ ಕೋವಿಡ್ 19 ಲಸಿಕೆ ಅಭಿಯಾನದಲ್ಲಿ ಈವರೆಗೆ 209.27 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.