ವಿಜಯಪೂರ: ವಿಶ್ವಕ್ಕೆ ಮಾನವೀಯತೆ ಸಾರಿದ ವಿಶ್ವಗುರು ಬಸವಣ್ಣನವರು ಜನ್ಮ ತಾಳಿದ ನೆಲದಲ್ಲಿ ಮರ್ಯಾದೆ ಹತ್ಯೆ ನಡೆದಿದೆ. ಅನ್ಯ ಕೋಮಿನ ಯುವಕನನ್ನು ಪ್ರೀತಿಸಿದ ಕಾರಣ ಅಪ್ರಾಪ್ತ ಬಾಲಕಿಯ ತಂದೆಯೇ ಸ್ವಂತ ಮಗಳು ಹಾಗೂ ಆಕೆಯ ಪ್ರಿಯಕರನ್ನು ಕೊಲೆ ಮಾಡಿ ಪರಾರಿಯಾಗಿದ್ದಾನೆ. ವಿಜಯಪುರ ಜಿಲ್ಲೆ ದೇವರಹಿಪ್ಪರಗಿ ತಾಲೂಕಿನ ಗಡಿ ಗ್ರಾಮ ಸಲಾದಹಳ್ಳಿಯಲ್ಲಿ ಈ ಘನಘೋರ ಕೃತ್ಯ ನಡೆದಿದೆ. ದೇವರಹಿಪ್ಪರಗಿ ತಾಲೂಕಿನ ಸಲಾದಹಳ್ಳಿ ಗ್ರಾಮದ ಯುವಕ ಬಸವರಾಜ ಬಡಿಗೇರ 19 ವರ್ಷ ಹಾಗೂ ಪಕ್ಕದ ಗ್ರಾಮ ಖಾನಾಫುರದ ಅಪ್ರಾಪ್ತ ವಯಸ್ಸಿನ
ಬಾಲಕಿ ಕೊಲೆಯಾದವರು. ಅಪ್ರಾಪ್ತ ಬಾಲಕಿ ಇಂದು ತನ್ನ ಪ್ರಿಯಕರ ಬಸವರಾಜ ಬಡಿಗೇರ ಭೇಟಿಯಾಗಿದ್ದ ವೇಳೆ ಇಬ್ಬರನ್ನೂ ಒಟ್ಟಿಗೆ ಕಂಡ ಬಾಲಕಿಯ ತಂದೆ ಇಬ್ಬರನ್ನೂ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿ ಪರಾರಿಯಾಗಿದ್ದಾನೆ. ಅಕ್ಕಪಕ್ಕದ ಗ್ರಾಮದವರಾದ ಬಸವರಾಜ್ ಹಾಗೂ ಅಪ್ರಾಪ್ತ ಬಾಲಕಿ ಪರಸ್ಪರ ಅನ್ಯಕೋಮಿನವರಾದರೂ ಇಬ್ಬರ ಮಧ್ಯೆ ಈ ಹಿಂದೆ ಸ್ನೇಹ ಉಂಟಾಗಿ ಅದು ಪ್ರೇಮಾಂಕುರಕ್ಕೆ ಕಾರಣವಾಗಿತ್ತು. ಆದರೆ ಇವರಿಬ್ಬರ ಪ್ರೇಮಕ್ಕೆ ಬಾಲಕಿಯರ ಮನೆಯವರ ತೀವ್ರ ವಿರೋಧವಿತ್ತು. ಇಷ್ಟಾದರೂ ಬಸವರಾಜ್ ಹಾಗೂ ಅಪ್ರಾಪ್ತೆ ನಡುವೆ ಪ್ರೀತಿ ಕಡಿಮೆಯಾಗಿರಲಿಲ್ಲ. ಇಂದು ಇಬ್ಬರು ಪ್ರೇಮಿಗಳು ಸಲಾದಹಳ್ಳಿ ಗ್ರಾಮದ ಹೊರ ಭಾಗದಲ್ಲಿ ಒಟ್ಟಿಗೆ ಇದ್ದರು. ಈ ವೇಳೆ ಸ್ಥಳಕ್ಕೆ ಬಂದ ಅಪ್ರಾಪ್ತೆಯ ಬಾಲಕಿ ತಂದೆ ಇಬ್ಬರನ್ನು ನೋಡಿ ಕೋಪಗೊಂಡಿದ್ದಾನೆ. ಸುದ್ದಿ ತಿಳಿದು
ಸ್ಥಳಕ್ಕೆ ಕಲಕೇರಿ ಠಾಣೆಯ ಪೊಲೀಸರು ದೌಡಾಯಿಸಿದ್ದಾರೆ. ಘಟನೆಯ ಕಾರಣ ಸಲಾದಹಳ್ಳಿ ಗ್ರಾಮದಲ್ಲಿ ಭಯದ ವಾತಾವರಣ
ಮನೆ ಮಾಡಿದೆ. ಕಲಕೇರಿ ಪೊಲೀಸ್ ಠಾಣಾ ವ್ಯಾಪ್ತಿ ಘಟನೆ ನಡೆದಿದೆ.