ಕೂಗು ನಿಮ್ಮದು ಧ್ವನಿ ನಮ್ಮದು

ಕೈ-ಕಾಲುಗಳನ್ನು ಕಟ್ಟಿಹಾಕಿ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಇಬ್ಬರ ಬಂಧನ

ಕೈ-ಕಾಲುಗಳನ್ನು ಕಟ್ಟಿಹಾಕಿ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಅಸ್ಸಾಂನಲ್ಲಿ ನಡೆದಿದ್ದು, ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ದಿಬ್ರುಗಢದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾದ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇಬ್ಬರು ಆರೋಪಿಗಳನ್ನು ಭಾಯಿಜಾನ್ ಅಲಿ ಮತ್ತು ಸಫರ್ ಅಲಿ ಎಂದು ಗುರುತಿಸಲಾಗಿದೆ ಎಂದು ದಿಬ್ರುಗಢ ಎಸ್ಪಿ ಶ್ವೇತಾಂಕ್ ಮಿಶ್ರಾ ಸುದ್ದಿಗಾರರಿಗೆ ತಿಳಿಸಿದ್ದಾರೆ.

ದಿಬ್ರುಗಢದಲ್ಲಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ. ಅಪ್ರಾಪ್ತ ಬಾಲಕಿ ಅಥಾಬರಿ ಚಹಾ ತೋಟದ ಬಳಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು ಎಂದು ಅವರು ಹೇಳಿದರು. ಆರೋಪಿಗಳ ವಿರುದ್ಧ 2012 ರ ಪೋಕ್ಸೋ ಕಾಯ್ದೆಯ ಸೆಕ್ಷನ್ 376 ರ ಅಡಿಯಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಸ್ಪಿ ತಿಳಿಸಿದ್ದಾರೆ. ಆಕೆಯ ಕೈ ಮತ್ತು ಕಾಲುಗಳನ್ನು ಹಗ್ಗದಿಂದ ಕಟ್ಟಲಾಗಿತ್ತು ಮತ್ತು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಲಾಗಿದೆ ಎಂದು ಶಂಕಿಸಲಾಗಿದೆ.

ಬಾಲಕಿ ಫೆಬ್ರವರಿ 3 ರಿಂದ ನಾಪತ್ತೆಯಾಗಿದ್ದಳು. ಆರೋಪಿಯ ವಿರುದ್ಧ ಪೋಕ್ಸೋ ಕಾಯ್ದೆ, 2012 ರ ಸೆಕ್ಷನ್ 376 ರ ಅಡಿಯಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

error: Content is protected !!