ಮಂಡ್ಯ: ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆಯಾಗಿ, ತೀವ್ರ ಹಲ್ಲೆಗೊಳಗಾಗಿದ್ದ ಯುವಕ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮದ್ದೂರು ತಾಲೂಕಿನ ಬೋರಾಪುರದ ಬಳಿ ನಡೆದಿದೆ. ಪುನೀತ್ ಮೃತ ರ್ದುದೈವಿ. ಹೌದು ಹಣದ ವಿಚಾರಕ್ಕೆ ಸ್ನೇಹಿತರ ನಡುವೆ ಜಗಳವಾಗಿ ಚಿಕ್ಕರಸಿನಕೆರೆ ಗ್ರಾಮದ ನಿವಾಸಿ ಪುನೀತ್ ಮೇಲೆ ಸ್ನೇಹಿತರು ತೀವ್ರ ಹಲ್ಲೆ ನಡೆಸಿದ್ದರು.
ಈ ವೇಳೆ ಆತನ ತಲೆಗೆ ಬಲವಾದ ಪೆಟ್ಟು ಬಿದ್ದಿತ್ತು. ಬಳಿಕ ಆತನನ್ನ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಪುನೀತ್ ಮೈಸೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಈ ಕುರಿತು ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.