ಕೂಗು ನಿಮ್ಮದು ಧ್ವನಿ ನಮ್ಮದು

ಪ್ರಿಯಕರನಿಂದ ಪ್ರಿಯತಮೆಯ ಕೊಲೆ,‌ ಆತ್ಮಹತ್ಯೆ ಎಂದು ಬಿಂಬಿಸಲು ಯತ್ನ

ಬೆಂಗಳೂರು: ಪ್ರಿಯಕರನಿಂದಲೇ ಪ್ರಿಯತಮೆ ಹತ್ಯೆಯಾಗಿರುವ ಘಟನೆ ಬೆಂಗಳೂರಿನ ಜೀವನ್ ಭೀಮಾನಗರದ ಕೋಡಿಹಳ್ಳಿಯಲ್ಲಿ ನಡೆದಿದೆ. ಪ್ರಿಯಕರ ಅರ್ಪಿತ್ ಕೊಲೆ ಆರೋಪಿ. ಆಕಾಂಕ್ಷಾ ಮೃತ ದುರ್ದೈವಿ. ನಿನ್ನೆ ರಂದು ಘಟನೆ ನಡೆದಿದೆ. ಜೀವನ್ ಭೀಮಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೈದರಾಬಾದ್ ಮೂಲದ ಆಕಾಂಕ್ಷಾ ಮತ್ತು ದೆಹಲಿ ಮೂಲದ ಅರ್ಪಿತ್ ಈ ಹಿಂದೆ ಒಂದೇ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಇಲ್ಲೇ ಇವರಿಬ್ಬರ ನಡುವೆ ಪ್ರೇಮಾಂಕುರವಾಗಿ, ಒಟ್ಟಿಗೆ ಒಂದೇ ಮನೆಯಲ್ಲಿ ವಾಸ ಮಾಡುತ್ತಿದ್ದರು. ಇತ್ತೀಚಿಗೆ ಕೆಲಸ ಬದಲಾವಣೆ ಮಾಡಿ ಬೇರೆ ಬೇರೆ ಕಡೆ ಕೆಲಸ ಮಾಡುತ್ತಿದ್ದರು.

ಆದರೆ ಇಬ್ಬರ ನಡುವೆ ಕಳೆದ ಕೆಲ ದಿನಗಳಿಂದ ಜಗಳವಾಗುತ್ತಿತ್ತು. ಈ ಹಿನ್ನಲೆ ಇಬ್ಬರು ಬೇರೆಯಾಗಬೇಕು ಎಂದು ಮಾತಾಡಿಕೊಂಡಿದ್ದರು. ನಿನ್ನೆ ಕೂಡ ಇಬ್ಬರ ನಡುವೆ ಗಲಾಟೆ ನಡೆದಿದೆ. ಗಲಾಟೆ ತಾರಕಕ್ಕೇರಿದ್ದು ಅರ್ಪಿತ್, ಆಕಾಂಕ್ಷಾಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ. ನಂತರ ಮೃತದೇಹದ ಕುತ್ತಿಗೆಗೆ ಬಟ್ಟೆ ಕಟ್ಟಿ ಫ್ಯಾನ್ಗೆ ಕಟ್ಟಲು ಯತ್ನಿಸಿದ್ದಾನೆ. ಆದರೆ ಸಾಧ್ಯವಾಗದೆ ನೆಲದ ಮೇಲೆ ಬಿಟ್ಟು ಪರಾರಿಯಾಗಿದ್ದಾನೆ. ನೇಣು ಹಾಕಿಕೊಂಡು ಸಾವನಪ್ಪಿರುವ ರೀತಿ ಬಿಂಬಿಸಲು ಯತ್ನಿಸಿದ್ದಾನೆ.

ರಾತ್ರಿ ಮತ್ತೊರ್ವ ರೂಮೆಂಟ್ ಕೆಲಸ ಮುಗಿಸಿ ಮನೆಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೊದಲು ಅನುಮಾನಾಸ್ಪದ ಸಾವು ಎಂದು ಅಂದುಕೊಂಡಿದ್ದರು. ಆದರೆ ಸ್ಥಳ ಪರಿಶೀಲನೆ ಬಳಿಕ ಕೊಲೆ ಎಂಬುದು ತಿಳಿದುಬಂದಿದೆ. ಇನ್ನು ಆರೋಪಿ ಅರ್ಪಿತ್ಗಾಗಿ ಪೊಲೀಸರು ಬಲೆ ಬೀಸಿದ್ದಾರೆ

error: Content is protected !!