ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಇವತ್ತು ಕಾಂಗ್ರೆಸ್ ಸ್ವಾತಂತ್ರ್ಯ ನಡಿಗೆ ಆಯೋಜಿಸಿದೆ. ಈ ಕಾರ್ಯಕ್ರಮದಲ್ಲಿ ಸುಮಾರು ಒಂದು ಲಕ್ಷಕ್ಕೂ ಅಧಿಕ ಕಾರ್ಯಕರ್ತರು ಭಾಗಿಯಾಗುವ ಸಾಧ್ಯತೆಗಳಿವೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಸ್ವಾತಂತ್ರ್ಯ ನಡಿಗೆ ಆರಂಭಗೊಳ್ಳಲಿದೆ. ಮೆಜೆಸ್ಟಿಕ್ನಿಂದ ನ್ಯಾಷನಲ್ ಕಾಲೇಜುವರೆಗೂ ಪಾದಯಾತ್ರೆ ನಡೆಯಲಿದೆ. ಈಗಾಗಲೇ ಹೊರ ಜಿಲ್ಲೆಗಳಿಂದ ಸಾಕಷ್ಟು ಕಾರ್ಯಕರ್ತರು ಬೆಂಗಳೂರಿಗೆ ಆಗಮಿಸಿದ್ದಾರೆ. ಈ ಪಾದಯಾತ್ರೆಯಲ್ಲಿ ಡಿ.ಕೆ.ಶಿವಕುಮಾರ್ ಜೊತೆ ಪಕ್ಷದ ದಿಗ್ಗಜರು ಭಾಗವಹಿಸಲಿದ್ದಾರೆ.
ಮಧ್ಯಾಹ್ನ ಎರಡು ಗಂಟೆಗೆ ಕಾಂಗ್ರೆಸ್ ಪಾದಯಾತ್ರೆ ಆರಂಭಗೊಳ್ಳಲಿದ್ದು, ನ್ಯಾಷನಲ್ ಕಾಲೇಜು ಮೈದಾನದಲ್ಲಿ ಸಮಾರೋಪ ಕಾರ್ಯಕ್ರಮ ನಡೆಯಲಿದೆ. ಸಂಜೆ ವಿವಿಧ ಸಾಂಸ್ಕೃತಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.
ಕಾಂಗ್ರೆಸ್ ಪಾದಯಾತ್ರೆ ಹಿನ್ನೆಲೆ ಇವತ್ತು ಬೆಂಗಳೂರಿನ ಈ ಮಾರ್ಗದಲ್ಲಿ ಟ್ರಾಫಿಕ್ ಜಾಮ್ ಉಂಟಾಗಲಿದೆ. ಹಾಗಾಗಿ ಸವಾರರು ಬದಲಿ ಮಾರ್ಗ ಬಳಸೋದು ಉತ್ತಮ.
ಮೆಜೆಸ್ಟಿಕ್ ,ಸಂಗೊಳ್ಳಿ ರಾಯಣ್ಣ ವೃತ್ತ, ಕೆ.ಆರ್ ವೃತ್ತ, ಹಡ್ಸನ್ ಸರ್ಕಲ್, ಜೆಸಿ ರಸ್ತೆ, ಮಿನರ್ವ ವೃತ್ತ, ವಿವಿಪುರಂ ವೃತ್ತ , ನ್ಯಾಷನಲ್ ಕಾಲೇಜು ಮೈದಾನ, ಸಂಗೊಳ್ಳಿ ರಾಯಣ್ಣ ಸರ್ಕಲ್ನಿಂದ ನ್ಯಾಷನಲ್ ಕಾಲೇಜುವರೆಗೂ ಪಾದಯಾತ್ರೆ ನಡೆಯಲಿದ್ದು, ಒಂದು ಸಾವಿರಕ್ಕೂ ಅಧಿಕ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಮಧ್ಯಾಹ್ನ 2 ಗಂಟೆ ಸುಮಾರಿಗೆ ಕಾಂಗ್ರೆಸ್ ಪಾದಯಾತ್ರೆ ಶುರುವಾಗಲಿದೆ. ಹೀಗಾಗಿ ಈ ರೂಟಲ್ಲಿ ಮಧ್ಯಾಹ್ನದಿಂದ ಸಂಜೆತನಕ ಟ್ರಾಫಿಕ್ ಜಾಮ್ ಆಗೋ ಎಲ್ಲಾ ಸಾಧ್ಯತೆ ಇದೆ.