ಕೂಗು ನಿಮ್ಮದು ಧ್ವನಿ ನಮ್ಮದು

ಎರಡನೇ ಸುತ್ತಿನ ಕಾಂಗ್ರೆಸ್ ಪದಾಧಿಕಾರಿ ಪಟ್ಟಿಗೆ ಗ್ರೀನ್ ಸಿಗ್ನಲ್ ಪಡೆಯಲು ಡಿ.ಕೆ.ಶಿವಕುಮಾರ್ ದೆಹಲಿಗೆ

ಬೆಂಗಳೂರು: ಮತ್ತೊಂದು ಸುತ್ತಿನ ಪದಾಧಿಕಾರಿಗಳ ಪಟ್ಟಿ ಸಿದ್ದಪಡಿಸಿಕೊಳ್ಳುವುದಕ್ಕೆ ಕಾಂಗ್ರೆಸ್ ಹೈಕಮಾಂಡ್ ಒಪ್ಪಿಗೆ ಪಡೆಯಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಂಗಳವಾರ ಆಗಸ್ಟ್ 16 ರಂದು ರಾತ್ರಿ ದಿಲ್ಲಿಗೆ ಪ್ರಯಾಣ ಬೆಳೆಸಿದ್ದಾರೆ ಎಂದು ವರದಿ ತಿಳಿಸಿದೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಭೆಯ ಬಳಿಕ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಜೊತೆಯಲ್ಲೇ ಡಿ.ಕೆ.ಶಿವಕುಮಾರ್ ದಿಲ್ಲಿಗೆ ಪ್ರಯಾಣ ಬೆಳೆಸಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

ಈಗಾಗಲೇ ಪ್ರಕಟವಾದ ಪದಾಧಿಕಾರಿಗಳ ಪಟ್ಟಿಗೆ ಹೆಚ್ಚುವರಿಯಾಗಿ ಕಾರ್ಯದರ್ಶಿಗಳು, ಜಿಲ್ಲಾಧ್ಯಕ್ಷರು ಮತ್ತು ಕೆಲ ಮುಂಚೂಣಿ ಘಟಕಗಳಿಗೆ ಈ ಸಂದರ್ಭದಲ್ಲಿ ಹೊಸ ಪದಾಧಿಕಾರಿಗಳ ಸೇರ್ಪಡೆ ಮಾಡಲಾಗುತ್ತದೆ ಎಂದು ತಿಳಿದು ಬಂದಿದೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ನಡುವಿನ ವಿರಸದಿಂದ ಮೊದಲ ಪಟ್ಟಿ ಬಿಡುಗಡೆಗೆ ಸಾಕಷ್ಟು ವಿಳಂಬವಾಗಿತ್ತು. ಆದ್ರೆ ಈ ಬಾರಿ ಅಂಥ ಯಾವುದೇ ಸಂದರ್ಭಗಳು ಸೃಷ್ಟಿಯಾಗಿಲ್ಲ ಎನ್ನಲಾಗಿದೆ.

error: Content is protected !!