ಬೆಳಗಾವಿ: ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರಾದ ಶ್ರೀ ಲಕ್ಷ್ಮಣ ಸವದಿ ಅವರು ಇಂದು ಅಥಣಿ ವಿಧಾನಸಭಾ ಕ್ಷೇತ್ರದ ಯಕ್ಕಂಚಿ ಗ್ರಾಮದ ಕೆರೆಗೆ ಬಾಗೀನ ಅರ್ಪಣೆ ಮಾಡಿದರು.
ಸದರಿ ಕೆರೆಗೆ ಕರಿಮಸೂತಿ ಏತ ನೀರಾವರಿ ಯೋಜನೆ ಅಡಿ ನೀರು ಹರಿಸಲಾಗಿದ್ದು ಈ ಭಾಗದ ಬಹುದಿನಗಳ ಬೇಡಿಕೆಯ ಕನಸು ನನಸಾಗಿದೆ. ಇದರಿಂದಾಗಿ ಈ ಭಾಗದ ರೈತರ ಜೀವನದ ಪದ್ಧತಿ ಬದಲಾವಣೆಯಾಗಿ ರೈತರ ಆರ್ಥಿಕ ಪರಿಸ್ಥಿತಿ ಸುಧಾರಣೆ ಆಗುವುದರ ಜೊತೆಗೆ ರೈತರ ಮುಖದಲ್ಲಿ ಮಂದಹಾಸ ಮೂಡಲಿದೆ ಎಂದು ಉಪ ಮುಖ್ಯಮಂತ್ರಿಗಳು ತಿಳಿಸಿದರು
ಈ ಸಂದರ್ಭದಲ್ಲಿ ಗ್ರಾಮದ ಮುಖಂಡರು ಪಕ್ಷದ ಹಿರಿಯರು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.