ಚಾಮರಾಜನಗರ: ಇರುವೆಗೆ ಸಿಂಪಡಿಸುವ ಔಷಧಿ ಸೇವಿಸಿ ಐದು ವರ್ಷದ ಬಾಲಕನೋರ್ವ ಸಾವನ್ನಪ್ಪಿರುವ ಘಟನೆ ಗುರುವಾರ ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಜರುಗಿದೆ. ತಾಲ್ಲೂಕಿನ ಪುಟ್ಟಿರಮ್ಮನ ದೊಡ್ಡಿ ಗ್ರಾಮದ ಕೇತೆಗೌಡ ಎಂಬಾತನ ಮಗ ಶಿವು (5) ಎಂಬ ಬಾಲಕ ಮೃತ್ತ ದುರ್ದೈವಿ. ಈತನು ಮಾ.1 ರಂದು ತನ್ನ ಮನೆಯ ಹಿತ್ತಲಿನಲ್ಲಿ ಆಟವಾಡುತ್ತಿದ್ದಾಗ ಕಿಟಕಿಯ ಬಳಿ ಇರುಗೆ ಸಿಂಪಡಿಸಲು ತಂದಿಟ್ಟಿದ್ದ ಇರುವೆ ಪುಡಿಯನ್ನು ತಿಂದು ನರಳಾಡುತ್ತಿದ್ದಾಗ ಕಂಡು ಮನೆಯವರು ತಕ್ಷಣ ಕಾಮಗೆರೆ ಆಸ್ಪತ್ರೆಗೆ ಕರೆದ್ದೋಗಿ ಪ್ರಥಮ ಚಿಕಿತ್ಸೆ ಕೊಡಿಸಿದರು. ಬಳಿಕ ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ಸೇರಿಸಲಾಯಿತು.
ನಿನ್ನೆ ಮಧ್ಯರಾತ್ರಿ ಚಿಕಿತ್ಸೆ ಫಲಕಾರಿಯಾಗದೇ ಬಾಲಕನು ಮೃತ್ತಪಟ್ಟಿದ್ದಾನೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು, ಪೊಲೀಸರು ಮೈಸೂರಿಗೆ ತೆರಳಿ ಇಂದು ಶವಪರೀಕ್ಷೆ ನಡೆಸಿ ಬಳಿಕ ವಾರಸುದಾರರಿಗೆ ಒಪ್ಪಿಸಿದರು