ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭಾನುವಾರ ಸಂಜೆ ವೇಳೆ ಸುರಿದ ಭಾರಿ ಮಳೆಗೆ ಫರ್ವ ಯುವತಿ ಬಲಿಯಾಗಿರುವ ದುರ್ಘಟನೆ ನಡೆದಿದೆ. ನಗರದ ಹೃದಯ ಭಾಗದಲ್ಲಿರುವ ಕೆ.ಆರ್. ವೃತ್ತದ ಬಳಿಯಿರುವ ಅಂಡರ್ಪಾಸ್ನಲ್ಲಿ ನಿಂತ ನೀರಿನಲ್ಲಿ ಕಾರು ಸಿಲುಕಿಕೊಂಡು ಮಹಿಳೆ ತೀವ್ರ ಅಸ್ವಸ್ಥಗೊಂಡಿದ್ದರು. ಅವರನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಮೃತ ಯುವತಿಯನ್ನು ಭಾನುರೇಖಾ (22) ಎಂದು ಗುರುತಿಸಲಾಗಿದ್ದು, ಬೆಂಗಳೂರಿನ ಇನ್ಫೋಸಿಸ್ನ ಉದ್ಯೋಗಿಯಾಗಿದ್ದಳು. ಶಾಲೆ, ಕಾಲೇಜುಗಳಿಗೆ ರಜೆ ಇರುವ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದಲ್ಲಿದ್ದ ಕುಟುಂಬಕ್ಕೆ ಬೆಂಗಳೂರು ತೋರಿಸಲು ಕರೆಯಿಸಿಕೊಂಡಿದ್ದಳು. ಆದ್ರೆ, ಬೆಂಗಳೂರಿನ ಮಹಾಮಳೆಗೆ ಭಾನುರೇಖಾ ದುರಂತ ಅಂತ್ಯಕಂಡಿದ್ದಾಳೆ.