ಬೆಂಗಳೂರು: ಬೆಂಗಳೂರಿನ ಕೆ.ಆರ್. ಸರ್ಕಲ್ ಬಳಿಯ ಅಂಡರ್‌ಪಾಸ್‌ನಲ್ಲಿ ನಿಂತ ನೀರಿನಲ್ಲಿ ಮುಳುಗಿದ ಕಾರನಲ್ಲಿ ಸಿಲುಕಿದ್ದ ಕುಟುಂಬವನ್ನು ರಕ್ಷಣೆ ಮಾಡುವಷ್ಟರಲ್ಲಿ ಯುವತಿ ಹಾಗೂ ವೃದ್ಧೆ ಇಬ್ಬರೂ ನೀರು ಕುಡಿದು ಅಸ್ವಸ್ಥರಾಗದ್ದರು. ಅವರನ್ನು ಕೂಡಲೇ ಹತ್ತಿರದಲ್ಲೇ ಇದ್ದ ಸೇಂಟ್ ಮಾರ್ಥಾಸ್ ಆಸ್ಪತ್ರೆಗೆ ರವಾನಿಸಲಾಗಿದೆ.
ಆದರೆ, ಆಸ್ಪತ್ರೆ ಸಿಬ್ಬಂದಿ ಯುವತಿ ಸ್ಥಿತಿ ಗಂಭೀರವಾಗಿದ್ದರೂ ಆಸ್ಪತ್ರೆಗೆ ದಾಖಲಿಸಿಕೊಳ್ಳುವಲ್ಲಿ ನಿರಾಕರಿಸಿದ್ದಾರೆ. ನಂತರ, ಪತ್ರಕರ್ತರು ತರಾಟೆಗೆ ತೆಗೆದುಕೊಂಡ ಬಳಿ ಸುಮಾರು ಅರ್ಧ ಗಂಟೆ ನಂತರ ಯುವತಿಯನ್ನು ಆಸ್ಪತ್ರೆಯೊಳಗೆ ಸೇರಿಸಿಕೊಂಡಿದ್ದಾರೆ. ಆದ್ರೆ, ಅಷ್ಟರಾಗಲೇ ಯುವತಿಯ ಜೀವ ಹೋಗಿದೆ. ಅರ್ಧ ಗಂಟೆಯೊಳಗೆ ಚಿಕಿತ್ಸೆ ನೀಡಿದ್ದರೆ ಯುವತಿ ಬದುಕುತ್ತಿದ್ದಳೋ ಏನೋ ಆದ್ರೆ, ಆಸ್ಪತ್ರೆಯ ಅಮಾನವೀಯತೆಗೆ ಬಾಳಿ ಬದುಕಬೇಕಾಗಿದ್ದ ಯುವತಿಯ ಪ್ರಾಣ ನುಂಗಿದ್ದಾರೆ.