ಕೂಗು ನಿಮ್ಮದು ಧ್ವನಿ ನಮ್ಮದು

ಕ್ಷೇತ್ರದಲ್ಲಿ ಕೈಗೊಂಡಿರುವ ಅಭಿವೃದ್ದಿ ಕೆಲಸಗಳೇ ನನಗೆ ಶ್ರೀರಕ್ಷೆ: ಸಚಿವೆ ಶಶಿಕಲಾ ಜೊಲ್ಲೆ

  • ಬಿರು ಬಿಸಿಲಿನ ನಡುವೆ ಸಚಿವೆ ಶಶಿಕಲಾ ಅ ಜೊಲ್ಲೆ ಮತಯಾಚನೆ
  • ಬುದಲಮುಖ ಹಾಗೂ ಪಾಂಗೆರಿ ಬಿ ಗ್ರಾಮದಲ್ಲಿ ಪ್ರಚಾರ ಸಭೆ

ನಿಪ್ಪಾಣಿ: ಕ್ಷೇತ್ರದ ಪ್ರತಿಯೊಂದು ಗ್ರಾಮದಲ್ಲೂ ಹಲವಾರು ಕೋಟಿ ರೂಪಾಯಿಗಳ ಅಭಿವೃದ್ದಿ ಕಾರ್ಯಗಳನ್ನ ಕೈಗೊಂಡಿದ್ದೇನೆ. ಈ ಅಭಿವೃದ್ದಿ ಕಾರ್ಯಗಳೇ ಈ ಬಾರಿಯ ಚುನಾವಣೆಯಲ್ಲಿ ನನಗೆ ಶ್ರೀರಕ್ಷೆ ಎಂದು ಮಾನ್ಯ ಮುಜರಾಯಿ ಹಜ್‌ ಮತ್ತು ವಕ್ಫ್‌ ಸಚಿವರು ಹಾಗೂ ನಿಪ್ಪಾಣಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಶಿಕಲಾ ಅ ಜೊಲ್ಲೆ ಹೇಳಿದರು.

ಇಂದು ಬಿರುಬಿಸಿಲಿನ ನಡುವೆ ನಿಪ್ಪಾಣಿ ವಿಧಾನಸಭಾ ಕ್ಷೇತ್ರದ ಬುದಲಮುಖ ಹಾಗೂ ಪಾಂಗೇರಿ ಬಿ ಗ್ರಾಮಗಳಲ್ಲಿ ಬಿರುಸಿನ ಮತಯಾಚನೆ ಮಾಡಿದರು. ತಮ್ಮ ಮತ ಪತ್ರಿಕೆ ನಮೂನೆಯನ್ನು ನೀಡಿ ಮಾತನಾಡಿದ ಅವರು, ಕಳೆದ ಎರಡು ಬಾರಿ ಶಾಸಕಿಯಾಗಿ ಬುದಲಮುಖ ಗ್ರಾಮದಲ್ಲಿ 10 ಕೋಟಿ 40 ಲಕ್ಷಕ್ಕೂ ಹೆಚ್ಚಿನ ಅಭಿವೃದ್ದಿ ಕಾಮಗಾರಿಗಳನ್ನು, ಪಾಂಗೆರಿ -ಬಿ ಗ್ರಾಮದಲ್ಲಿ 13 ಕೋಟಿಗೂ ಅಧಿಕ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದೇನೆ. ಗ್ರಾಮದಲ್ಲಿ ರಸ್ತೆ, ಚರಂಡಿ, ಮನೆ ಮನೆಗೆ ಕುಡಿಯುವ ನೀರಿನ ವ್ಯವಸ್ಥೆ, ಅಂಗನವಾಡಿ, ದೇವಸ್ಥಾನ ಜೀರ್ಣೋದ್ದಾರ ಹೀಗೆ ಹಲವಾರು ಕಾಮಗಾರಿ ಕೈಗೊಂಡಿದ್ದೇನೆ.

ಕ್ಷೇತ್ರದಲ್ಲಿ ಆಭಿವೃದ್ದಿ ಕಾರ್ಯಗಳನ್ನು ಕೈಗೊಳ್ಳುವ ಸದಾವಕಾಶ ನೀಡಿದ್ದೀರಿ. ನಾನು ಕ್ಷೇತ್ರದ ಮತದಾರರು ನನ್ನ ಮೇಲಿಟ್ಟ ಭರವಸೆಯನ್ನು ಉಳಿಸಿಕೊಂಡಿದ್ದೇನೆ. ಈ ಎಲ್ಲಾ ಅಭಿವೃದ್ದಿ ಕಾರ್ಯಗಳು ನನಗೆ ಶ್ರೀರಕ್ಷೆಯಾಗಿದ್ದು, ಈ ಬಾರಿಯ ಚುನಾವಣೆಯಲ್ಲಿ ಮತದಾರರು ನನ್ನನ್ನು ಬೆಂಬಲಿಸಲಿದ್ದಾರೆ ಎಂದು ಹೇಳಿದರು.

ಕ್ಷೇತ್ರದ ಬಿಜೆಪಿ ಪ್ರಮುಖರು ಮತ್ತು ನೂರಾರು ಮಹಿಳೆಯರು ಚುನಾವಣಾ ಪ್ರಚಾರದಲ್ಲಿ ಬಿಜೆಪಿ ಅಭ್ಯರ್ಥಿ ಶಶಿಕಲಾ ಅ ಜೊಲ್ಲೆ ಅವರಿಗೆ ಸಾಥ್‌ ನೀಡಿದರು.

error: Content is protected !!