ಕೂಗು ನಿಮ್ಮದು ಧ್ವನಿ ನಮ್ಮದು

ಆಕ್ಸಿಜನ್ ಕೊರತೆಯಿಂದ ಮೃತರಾದ ಕುಟುಂಬಗಳಿಗೆ ಕೆ.ಪಿ.ಸಿ.ಸಿ ವತಿಯಿಂದ ಒಂದು ಲಕ್ಷ ರೂಪಾಯಿ ಪರಿಹಾರ ವಿತರಣೆ

ಚಾಮರಾಜನಗರ : ಕಳೆದ ಮೇ ತಿಂಗಳ 2 ರಂದು ಚಾಮರಾಜನಗರ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ ದುರಂತದಲ್ಲಿ ಮೃತಪಟ್ಟ ಚಾಮರಾಜನಗರ ಜಿಲ್ಲೆ ಕೊಳ್ಳೆಗಾಲ ತಾಲೂಕಿನ ಚಿನ್ನಪ್ಪನಪುರದೊಡ್ಡಿಯ ಕೊರೋನಾ ಸೋಂಕಿತ ರಂಗಸ್ವಾಮಿ ಅವರ ನಿವಾಸಕ್ಕೆ ಭಾನುವಾರ ಭೇಟಿ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮೃತರ ಪತ್ನಿ ಪುಷ್ಪಾ ರಂಗಸ್ವಾಮಿ ಸಾಂತ್ವಾನ ಹೇಳಿದ್ದಲ್ಲದೆ, ಕಾಂಗ್ರೆಸ್ ಪಕ್ಷದ ವತಿಯಿಂದ 1 ಲಕ್ಷ ರೂಪಾಯಿ ಪರಿಹಾರದ ಚೆಕ್ ವಿತರಿಸಿದರು.

ಈ ವೇಳೆ ಕಾರ್ಯಾಧ್ಯಕ್ಷ ಹಾಗೂ ಮಾಜಿ ಸಂಸದ ಆರ್. ಧೃವನಾರಾಯಣ್, ಹನೂರು ಕ್ಷೇತ್ರದ ಶಾಸಕ ಆರ್. ನರೇಂದ್ರ, ಮಾಜಿ ಶಾಸಕರಾದ ಎ.ಆರ್. ಕೃಷ್ಣಮೂರ್ತಿ, ಎಸ್.ಬಾಲರಾಜ್ ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷ ಪಿ.ಮರಿಸ್ವಾಮಿ ಸೇರಿದಂತೆ ಅನೇಕ ಉಪಸ್ಥಿತರಿದ್ದರು.

error: Content is protected !!