ಬಿಜೆಪಿ ನಾಯಕರಿಗೆ ಡಿಕೆಶಿ ತಿರುಗೇಟು. ರೇಟ್ ಕಾರ್ಡ್ ಕೊಟ್ಟಿದ್ದು ನಾನಲ್ಲ, ಬಿಜೆಪಿಯವರ ರೇಟ್ ಕಾರ್ಡ್ ಕೊಟ್ಟಿದ್ದು ಯತ್ನಾಳ್. ರೇಟ್ ಕಾರ್ಡ್ ಕೊಟ್ಟಿದ್ದು ಗೂಳಿಹಟ್ಟಿ ಶೇಖರ್, ವಿಶ್ವನಾಥ್. ಎಲ್ಲ ಅವರ ಪಾರ್ಟಿಯವರೇ. ಮುಖ್ಯಮಂತ್ರಿ ಸ್ಥಾನಕ್ಕೆ ರೇಟ್ ಎಷ್ಟು? ಮಂತ್ರಿ ಸ್ಥಾನಕ್ಕೆ ಎಷ್ಟು, ಮಠಗಳ ಸ್ವಾಮೀಜಿಗಳಿಂದ ಎಷ್ಟು ಅಂತ ರೇಟ್ ಕಾರ್ಡ್ ಕೊಟ್ಟಿದ್ದು ಬಿಜೆಪಿಯವರೇ ತಾನೇ.
ಅದನ್ನು ನಾವು ಜಾಹೀರಾತು ಕೊಟ್ಟಿದ್ದೇವೆ ಅಷ್ಟೇ ಎಂದು ಎಲೆಕ್ಷನ್ ಕಮಿಷನ್ ನೊಟೀಸ್ ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಉತ್ತರಿಸಿದ್ದಾರೆ.