ಕೂಗು ನಿಮ್ಮದು ಧ್ವನಿ ನಮ್ಮದು

ತೀವ್ರ ಮಳೆ: ಕಟ್ಟೆಚ್ಚರ ವಹಿಸಲು ಪಾಲಿಕೆ ಅಧಿಕಾರಿಗಳಿಗೆ ಡಿಸಿಎಂ ಸೂಚನೆ

ತೀವ್ರ ಮಳೆ ಹಿನ್ನೆಲೆ ಕಟ್ಟೆಚ್ಚರ ವಹಿಸಲು ಬಿಬಿಎಂಪಿ ಅಧಿಕಾರಿಗಳಿಗೆ ಅಧಿಕಾರಿಗಳಿಗೆ ಡಿಸಿಎಂ ಡಿ ಕೆ ಶಿವಕುಮಾರ್ ಸೂಚನೆ ನೀಡಿದ್ದಾರೆ. ಮಳೆ ಅನಾಹುತ ಆಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಒಂದೊಮ್ಮೆ ಅನಾಹುತಗಳ ಬಗ್ಗೆ ವರದಿಯಾದರೆ ತುರ್ತು ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು.

ಇದಕ್ಕಾಗಿ ವಾರ್ ರೂಮ್ ಮೂಲಕ ಕಟ್ಟೆಚ್ಚರ ವಹಿಸಬೇಕು. ಸಂಭವನೀಯ ಮಳೆ ಅನಾಹುತಗಳ ಬಗ್ಗೆಯೂ ನಿಗಾ ವಹಿಸಬೇಕು. ಎಲ್ಲೇ ಏನೇ ಅನಾಹುತವಾದರೂ ಸಮಾರೋಪಾದಿಯಲ್ಲಿ ಪರಿಹಾರ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದ್ದಾರೆ.

error: Content is protected !!