ಹುಬ್ಬಳ್ಳಿ: ಬಿಜೆಪಿ ತ್ಯಜಿಸಿ ಕಾಂಗ್ರೆಸ್ ಸೇರ್ಪಡೆಯಾಗಿ ವಿಧಾನಸಭೆ ಚುನಾವಣೆ ಸ್ಪರ್ಧಿಸಿ ಸೋತಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರಿಗೆ ಉನ್ನತ ಸ್ಥಾನಮಾನ ನೀಡುವ ವಿಚಾರವಾಗಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಇಂದು ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ನಾಯಕ ಜಗದೀಶ್ ಶೆಟ್ಟರ್ ಅವರೊಂದಿಗೆ ಗೌಪ್ಯ ಸಭೆ ನಡೆಸಿದರು. ಸಭೆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಜಗದೀಶ್ ಶೆಟ್ಟರ್, ಡಿಕೆ ಶಿವಕುಮಾರ ಅವರ ಜೊತೆ ಔಪಚಾರಿಕವಾದ ಮಾತುಕತೆಯಾಗಿದೆ.
ಉತ್ತರ ಕರ್ನಾಟಕ ಭಾಗದ ಸಂಘಟನೆ ಬಗ್ಗೆ ಡಿಕೆಶಿ ಸಂತೋಷ ವ್ಯಕ್ತಪಡಿಸಿದರು. ಮುಂಬರುವ ಚುನಾವಣೆ ಕುರಿತು ಚರ್ಚೆ ಮಾಡಿದ್ದೇವೆ ಎಂದು ಹೇಳಿದರು