ಕೂಗು ನಿಮ್ಮದು ಧ್ವನಿ ನಮ್ಮದು

ಬೆಂಗಳೂರು ಶಾಸಕರ ಸಭೆ ಕರೆದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್

ಇಂದು ಬೆಳಗ್ಗೆ 11 ಗಂಟೆಗೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬೆಂಗಳೂರು ಶಾಸಕರ ಸಭೆ ಕರೆದಿದ್ದಾರೆ. ಮಳೆಯಿಂದ ಮುಂಜಾಗ್ರತ ಕ್ರಮಗಳು, ನಾಗರಿಕರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಸಭೆಯಲ್ಲಿ ಬಿಬಿಎಂಪಿ ವ್ಯಾಪ್ತಿಯ ಸಂಸದರು, ಶಾಸಕರು ಹಾಗೂ ಎಂಎಲ್ಸಿಗಳು ಭಾಗಿಯಾಗಲಿದ್ದಾರೆ.

ಸರ್ವ ಪಕ್ಷದ ನಾಯಕರುಗಳಿಂದ ಸಲಹೆ ಮತ್ತು ಅಭಿಪ್ರಾಯಗಳನ್ನ ಸಂಗ್ರಹಿಸಲಾಗುತ್ತಿದೆ. ಸಭೆಯಲ್ಲಿ ಬಿಬಿಎಂಪಿ ಚುನಾವಣೆಗೆ ಸಂಬಂಧಿಸಿಯೂ ಚರ್ಚೆ ಸಾಧ್ಯತೆ.

error: Content is protected !!