ಗಂಡನಿಂದಲೇ ಕೃತ್ಯ ಶಂಕೆ.. ಆರೋಪಿ ಪತ್ತೆಗಾಗಿ ಬಲೆ ಬೀಸಿದ ಪೋಲಿಸರು
ವಿಜಯಪುರ: ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಮಹಿಳೆ ಸೇರಿದಂತೆ ಜೋಡಿ ಕೊಲೆ ನಡೆದಿದೆ. ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಗಣಿ ಗ್ರಾಮದ ಜಮೀನಿನಲ್ಲಿ ಈ ಘಟನೆ ನಡೆದಿದೆ.
ಸೋಮನಿಂಗ ಕುಂಬಾರ್ (೪೦) ಮತ್ತು ರೇಣುಕಾ ತಳವಾರ್ (೩೫) ಕೊಲೆಯಾದವರು. ಇವರಿರ್ವರನ್ನು ಕೊಲೆಗೈದು ಹಂತಕರು ನಾಪತ್ತೆಯಾಗಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ನಿಡಗುಂದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.