ಬೆಂಗಳೂರು: ನಗರ ಪೊಲೀಸರು ಡ್ರಗ್ಸ್ ದಂಧೆ ಮೇಲೆ ಹೆಚ್ಚಿನ ನಿಗಾ ಇಟ್ಟಿದ್ದು, ಕಳೆದ 2-3 ದಿನಗಳಿಂದ ನಗರದ ಶಾಲಾ-ಕಾಲೇಜು, ಪಿಜಿ ಸುತ್ತಮುತ್ತ ಪ್ರದೇಶಗಳಲ್ಲಿ ದಾಳಿ ಮಾಡಿದ್ದಾರೆ. ಇದೀಗ ಶಾಲಾ ಕಾಲೇಜು ಆರಂಭ ಹಿನ್ನೆಲೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು ನಗರದ ಎಲ್ಲಾ ವಿಭಾಗದ ಪೊಲೀಸರು ಪರಿಶೀಲನೆಗೆ ಮುಂದಾಗಿದ್ದು, ನಗರದ 250ಕ್ಕೂ ಹೆಚ್ಚು ಪ್ರದೇಶಗಳಲ್ಲಿ ದಾಳಿ ನಡೆಸಿ ಗಾಂಜಾ, ಎಂಡಿಎಂಎ ಸೇರಿದಂತೆ ಹಲವಾರು ಮಾದರಿಯ ಡ್ರಗ್ಸ್ಗಳನ್ನು ಜಪ್ತಿ ಮಾಡಿದ್ದಾರೆ.