ಕೂಗು ನಿಮ್ಮದು ಧ್ವನಿ ನಮ್ಮದು

ವಿಧಾನಸಭಾ ಚುನಾವಣೆಗೆ ಪೊಲೀಸ್ ಸರ್ಪಗಾವಲು

ನಾಳೆ ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಪಾರದರ್ಶಕವಾಗಿ ಚುನಾವಣೆ ನಡೆಸಲು ಹಾಗೂ ಅಹಿತಕರ ಘಟನೆ ನಡೆಯಂತೆ ಮುಂಜಾಗ್ರತ ಕ್ರಮ ರಾಜ್ಯ ಪೊಲೀಸ್ ಇಲಾಖೆ ಭರ್ಜರಿ ಸಿದ್ಧತೆ ನಡೆಸಿದೆ. ಕೇಂದ್ರಿಯ ಪಡೆ, ಅನ್ಯ ರಾಜ್ಯಗಳ ಪೊಲೀಸರು ಸೇರಿದಂತೆ‌ ಒಟ್ಟು 1,56 ಲಕ್ಷ ಪೊಲೀಸರು ಕಾರ್ಯ ನಿರ್ವಹಿಸಲು ಸನ್ನದ್ಧರಾಗಿದ್ದಾರೆ. ಚುನಾವಣಾ ಕರ್ತವ್ಯಕ್ಕಾಗಿ 304 ಡಿವೈಎಸ್‌ಪಿಗಳು, 991 ಇನ್ ಸ್ಪೆಕ್ಟರ್, 2,610 ಪಿಎಸ್‌ಐ, 5,803 ಎಎಸ್‌, 46,421 ಹೆಚ್‌ಸಿ ಹಾಗೂ ಪಿಸಿ 27,990 ಹೋಂ ಗಾರ್ಡ್ಸ್ ಸೇರಿದಂತೆ ಒಟ್ಟು 84,119 ಮತ್ತು ಸಿಬ್ಬಂದಿಯನ್ನ ನೇಮಿಸಲಾಗಿದೆ.

ಅವಶ್ಯಕತೆಗನುಗುಣವಾಗಿ ಅಧಿಕಾರಿ ಹಾಗೂ ಸಿಬ್ಬಂದಿ ಕೊರತೆಯನ್ನು ಸರಿದೂಗಿಸಲು ಹೊರ ರಾಜ್ಯಗಳಿಂದ ಸುಮಾರು 8,500 ಪೊಲೀಸ್‌ ಅಧಿಕಾರಿ ಹಾಗೂ ಸಿಬ್ಬಂದಿ ಹಾಗೂ ಗೃಹ ರಕ್ಷಕರನ್ನು ಕರೆಸಲಾಗಿದೆ. 650 ಸಿಎಪಿಎಫ್ ಕಂಪನಿಗಳ ಜೊತೆಗೆ ರಾಜ್ಯ ಸಶಸ್ತ್ರ ಮೀಸಲು ಪಡೆ ಸಹ ನಿಯೋಜಿಸಲಾಗಿದೆ. ಒಟ್ಟಾರೆಯಾಗಿ 1,56,000 .ಪೊಲೀಸ್‌ ಅಧಿಕಾರಿ/ಸಿಬ್ಬಂದಿಯನ್ನು ಬಂದೋಬಸ್ತ್ ಕರ್ತವ್ಯಕ್ಕೆ ನೇಮಿಸಲಾಗಿದೆ. ಒಟ್ಟು 58,282 ಮತಗಟ್ಟೆಗಳಿದ್ದು, ಅದರಲ್ಲಿ 11,617 ಮತಗಟ್ಟೆಗಳನ್ನು ಸೂಕ್ಷ್ಮ ಮತಗಟ್ಟೆಗಳೆಂದು ಗುರುತಿಸಲಾಗಿದ್ದು, ಕಾನೂನು ಮತ್ತು ಸುವ್ಯವಸ್ಥೆ ಅನುಗುಣವಾಗಿ ಸೂಕ್ಷ್ಮ ಮತಗಟ್ಟೆಗಳಿಗೆ ಪೊಲೀಸ್ ಸಿಬ್ಬಂದಿ ಜೊತೆಗೆ ಹೆಚ್ಚುವರಿಯಾಗಿ ಸಿಎಪಿಎಫ್ ಕಂಪನಿಗಳನ್ನು ನಿಯೋಜಿಸಲಾಗಿದೆ.

error: Content is protected !!