ಬೆಳಗಾವಿ: ವಿಧಾನ ಪರಿಷತ್ ಚುನಾವಣೆಯಲ್ಲಿ ಗೆಲುವು ಸಾಧಿಸುವಲ್ಲಿ ಸಹಕರಿಸಿದ ಎಲ್ಲರಿಗೂ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಹಾಗೂ ವಿಧಾನ ಪರಿಷತ್ ನೂತನ ಸದಸ್ಯ ಚನ್ನರಾಜ ಹಟ್ಟಿಹೊಳಿ ಕೃತಜ್ಞತೆ ಸಲ್ಲಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಅವರು, ಟಿಕೆಟ್ ಘೋಷಣೆಯಿಂದ ಆರಂಭವಾಗಿ ಆಯ್ಕೆಯಾಗುವವರೆಗೂ ಹಲವಾರು ಜನರು ಸಹಕಾರ ನೀಡಿದ್ದಾರೆ. ಅವರೆಲ್ಲರಿಗೂ ಧನ್ಯವಾದಗಳನ್ನು ಸಲ್ಲಿಸುತ್ತೇವೆ ಎಂದಿದ್ದಾರೆ.
ಎಲ್ಲ ಮತದಾರರು, ಪಕ್ಷದ ರಾಷ್ಟ್ರೀಯ ನಾಯಕರು, ರಾಜ್ಯ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಜಿಲ್ಲೆಯ ಮುಖಂಡರಾದ ಪ್ರಕಾಶ ಹುಕ್ಕೇರಿ, ಎ.ಬಿ.ಪಾಟೀಲ, ವೀರಕುಮಾರ ಪಾಟೀಲ, ಅಶೋಕ ಪಟ್ಟಣ, ಜಿಲ್ಲೆಯ ಎಲ್ಲ ಕಾಂಗ್ರೆಸ್ ಶಾಸಕರು, ಮಾಜಿ ಶಾಸಕರು, ಜಿಲ್ಲಾಧ್ಯಕ್ಷರು, ಬ್ಲಾಕ್ ಅಧ್ಯಕ್ಷರು, ವಿವಿಧ ಘಟಕಗಳ ಪದಾಧಿಕಾರಿಗಳು, ಕಾರ್ಯಕರ್ತರು ಸೇರಿದಂತೆ ಎಲ್ಲರಿಗೂ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.
ಮುಂದಿನ ದಿನಗಳಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡಲಾಗುವುದು. ಮುಂದೆ ಕೂಡ ಎಲ್ಲರ ಸಹಕಾರ ಅಗತ್ಯ ಎಂದು ಲಕ್ಷ್ಮಿ ಹೆಬ್ಬಾಳಕರ್ ಹಾಗೂ ಚನ್ನರಾಜ ಹಟ್ಟಿಹೊಳಿ ಜಂಟಿ ಹೇಳಿಕೆಯಲ್ಲಿ ಕೋರಿದ್ದಾರೆ.