ಕೂಗು ನಿಮ್ಮದು ಧ್ವನಿ ನಮ್ಮದು

ಔಷಧಿ ಘಟಕದಲ್ಲಿ ಅಗ್ನಿ ದುರಂತ: ಆರು ಜನ ಸಾವು

ಹೈದರಾಬಾದ್: ಅನಿಲ ಸೋರಿಕೆಯಿಂದ ರಿಯಾಕ್ಟರ್ ಸ್ಫೋಟಗೊಂಡು ಔಷಧಿ ಘಟಕದಲ್ಲಿ ಕೆಲಸ ಮಾಡುತ್ತಿದ್ದ ಆರು ಮಂದಿ ಸಜೀವ ದಹನವಾಗಿದ್ದು, ಹದಿಮೂರು ಜನ ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.
ಉದುರುಪತಿ ಕೃಷ್ಣಯ್ಯ, ಬಿ ಕಿರಣ್ ಕುಮಾರ್, ಕಾರು ರವಿ ದಾಸ್, ಮನೋಜ್ ಕುಮಾರ್, ಸುವಾಸ್ ರವಿ ದಾಸ್ ಮತ್ತು ಹಬ್ದಾಸ್ ರವಿ ದಾಸ್ ಮೃತರು. ಏಲೂರು ಜಿಲ್ಲೆಯ ಅಕ್ಕಿರೆಡ್ಡಿಗುಡೆಂನಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೃತಪಟ್ಟ ಆರು ಮಂದಿಯಲ್ಲಿ ನಾಲ್ವರು ಬಿಹಾರದಿಂದ ವಲಸೆ ಬಂದ ಕಾರ್ಮಿಕರಾಗಿದ್ದಾರೆ.

ಬೆಂಕಿ ಕಾಣಿಸಿಕೊಂಡಾಗ ಹದಿನೆಂಟು ಜನ ಔಷಧಿ ಘಟಕದಲ್ಲಿ ಕೆಲಸ ಮಾಡುತ್ತಿದ್ದರು. ಇದರಿಂದಾಗಿ ತೀವ್ರವಾದ ನಷ್ಟ ಉಂಟಾಗಿದೆ. ಬೆಂಕಿಯನ್ನು ಹತೋಟಿಗೆ ತರಲು ಎರಡು ಗಂಟೆ ಬೇಕಾಯಿತು. ಘಟನಾ ಸ್ಥಳಕ್ಕೆ ಧಾವಿಸಿದ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ದೇವ್ ಶರ್ಮಾ, ಅನಿಲ ಸೋರಿಕೆಗೆ ಕಾರಣವನ್ನು ಪತ್ತೆ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.
ಘಟನೆಯ ಬಗ್ಗೆ ಸಿಎಂ ಜಗನ್ ಮೋಹನ್ ರೆಡ್ಡಿ ಸಂತಾಪ ವ್ಯಕ್ತಪಡಿಸಿದ್ದು, ಮೃತರ ಕುಟುಂಬಕ್ಕೆ ಇಪ್ಪತೈದು ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ. ಗಂಭೀರ ಗಾಯಗೊಂಡವರಿಗೆ ತಲಾ ಐದು ಲಕ್ಷ ರೂಪಾಯಿ ಮತ್ತು ಸಣ್ಣಪುಟ್ಟ ಗಾಯಳುಗಳಿಗೆ ಎರಡು ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ. 

error: Content is protected !!