ಕೂಗು ನಿಮ್ಮದು ಧ್ವನಿ ನಮ್ಮದು

ಸ್ಪೈಸ್‍ಜೆಟ್‌ನಲ್ಲಿ ಹೊಗೆ, ದೆಹಲಿಗೆ ವಿಮಾನ ವಾಪಸ್

ನವದೆಹಲಿ: ಪ್ರಯಾಣಿಕರನ್ನು ಹೊತ್ತು ಜಬಲ್‍ಪುರಕ್ಕೆ ಹೊರಟ್ಟಿದ್ದ ಸ್ಪೈಸ್‍ಜೆಟ್ ವಿಮಾನದ ಕ್ಯಾಬಿನ್‍ನಲ್ಲಿ ಹೊಗೆ ಕಾಣಿಸಿಕೊಂಡ ಹಿನ್ನೆಲೆ ಇವತ್ತು ಮುಂಜಾನೆ ದೆಹಲಿ ವಿಮಾನ ನಿಲ್ದಾಣಕ್ಕೆ ವಿಮಾನವು ಮರಳಿದೆ. ದೆಹಲಿಯಿಂದ ಜಬಲ್‍ಪುರಕ್ಕೆ ಹೊರಟಿದ್ದ ಸ್ಪೈಸ್‍ಜೆಟ್ ವಿಮಾನವು ಇವತ್ತು ಮುಂಜಾನೆ ದೆಹಲಿ ವಿಮಾನ ನಿಲ್ದಾಣಕ್ಕೆ ಸುರಕ್ಷಿತವಾಗಿ ಮರಳಿದೆ. ವಿಮಾನವು 5,000 ಅಡಿ ಎತ್ತರದಲ್ಲಿ ಹಾರಾಡುತ್ತಿದ್ದ ವೇಳೆ ಕ್ಯಾಬಿನ್ ಒಳಗೆ ಹೊಗೆ ಬರುತ್ತಿರುವುದನ್ನು ಸಿಬ್ಬಂದಿ ಗಮನಿಸಿದ್ದಾರೆ. ಸದ್ಯ ವಿಮಾನದಲ್ಲಿದ್ದ ಪ್ರಯಾಣಿಕರೆಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ಸ್ಪೈಸ್‍ಜೆಟ್ ವಕ್ತಾರರು ತಿಳಿಸಿದ್ದಾರೆ. 

ಇದೀಗ ಕ್ಯಾಬಿನ್ ಒಳಗೆ ಹೊಗೆ ಆವರಿಸಿರುವ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ದೆಹಲಿಗೆ ವಿಮಾನ ಹಿಂದುರುಗಿದ ಬಳಿಕ ಪ್ರಯಾಣಿಕರು ನಿರ್ಗಮಿಸುತ್ತಿರುವುದನ್ನು ಕಾಣಬಹುದಾಗಿದೆ. 

error: Content is protected !!