ಕೂಗು ನಿಮ್ಮದು ಧ್ವನಿ ನಮ್ಮದು

ಸಣ್ಣ ರೈತರಿಗೆ ಕೃಷಿ ಉಪಕರಣಗಳ ಬಳಕೆ” ಕಾರ್ಯಾಗಾರಕ್ಕೆ

ಕಲಬುರಗಿ ವಿಭಾಗದ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘದಿಂದ ಕೃಷಿ ಅಭಿವೃದ್ಧಿ ವಿಭಾಗದಡಿ ಕಲ್ಯಾಣ ಕರ್ನಾಟಕ ವಿಭಾಗ ವ್ಯಾಪ್ತಿಯ ಕಲಬುರಗಿ, ಬೀದರ್, ರಾಯಚೂರು, ಕೊಪ್ಪಳ, ಬಳ್ಳಾರಿ, ಯಾದಗಿರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿನ ರೈತರಿಗೆ ಉದ್ಯೋಗ ಕಲ್ಪಿಸಿಕೊಳ್ಳಲು ಹಾಗೂ ಪ್ರೋತ್ಸಾಹಿಸಲು “ಸಣ್ಣ ರೈತರಿಗೆ ಕೃಷಿ ಉಪಕರಣಗಳ ಬಳಕೆ” ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಇದಕ್ಕಾಗಿ ಕಲ್ಯಾಣ ಕರ್ನಾಟಕ ವಿಭಾಗದ ಅರ್ಹ ರೈತರಿಂದ ಆನ್‍ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಈಗಾಗಲೇ ಮಾರ್ಚ್ 3 ರಿಂದ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಆರಂಭಗೊಂಡಿದ್ದು, ಆಸಕ್ತಿಯುಳ್ಳ ಅರ್ಜಿದಾರರು ಸಂಘದ www.kkhracs.com ವೆಬ್‍ಸೈಟ್‍ನಲ್ಲಿ ಕೇಳಲಾದ ದಾಖಲೆಗಳೊಂದಿಗೆ ಆನ್‍ಲೈನ್ ಮೂಲಕ 2023ರ ಮಾರ್ಚ್ 9ರ ಸಂಜೆ 5.30 ಗಂಟೆಯೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸಂಘದ ವೆಬ್‍ಸೈಟ್‍ನ್ನು ಸಂಪರ್ಕಿಸಲು ಕೋರಲಾಗಿದೆ.

error: Content is protected !!