ಕೂಗು ನಿಮ್ಮದು ಧ್ವನಿ ನಮ್ಮದು

ಇಂದಿನಿಂದ 2 ದಿನ ಗೃಹ ಸಚಿವ ಡಾ.ಪರಮೇಶ್ವರ್ ಮಂಗಳೂರು, ಉಡುಪಿ ಪ್ರವಾಸ

ಮಂಗಳೂರು: ಗೃಹ ಸಚಿವ ಡಾ.ಪರಮೇಶ್ವರ್ ಅವರು ಇಂದಿನಿಂದ 2 ದಿನ ಮಂಗಳೂರು ಉಡುಪಿ ಪ್ರವಾಸ ಕೈಗೊಂಡಿದ್ದಾರೆ. ಇಂದು ಬೆಳಿಗ್ಗೆ 8.35ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಗೃಹ ಸಚಿವರು ಬೆಳಗ್ಗೆ 10 ಗಂಟೆಗೆ ಪೊಲೀಸ್ ಪಶ್ಚಿಮ ವಲಯ ಕಚೇರಿಯಲ್ಲಿ ವಲಯ ಪರಿಶೀಲನಾ ಸಭೆ ನಡೆಸಲಿದ್ದಾರೆ.

ಮಧ್ಯಾಹ್ನ 12 ಗಂಟೆಗೆ ಮಂಗಳೂರಿನ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಲಿದ್ದು 12.30ಕ್ಕೆ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಪೊಲೀಸ್ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣಗಳ ಬಗ್ಗೆಯೂ ಚರ್ಚೆ ನಡೆಯುವ ಸಾಧ್ಯತೆ ಇದೆ. ಬಳಿಕ ಮಧ್ಯಾಹ್ನ 2 ಗಂಟೆಗೆ ಉಡುಪಿಗೆ ತೆರಳಲಿದ್ದಾರೆ. ಉಡುಪಿಯಲ್ಲೂ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ.

ಮಧ್ಯಾಹ್ನ 3 ಗಂಟೆಗೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದು, ಸಂಜೆ 5.30ಕ್ಕೆ ಉಡುಪಿ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಬಳಿಕ ಸಂಜೆ 6 ಗಂಟೆಗೆ ಕೊಲ್ಲೂರಿಗೆ ತೆರಳಿದ್ದಾರೆ.

ಮಾರ್ಚ್ 7 ರಂದು ಬುಧವಾರ ಬೆಳಿಗ್ಗೆ 7 ಗಂಟೆಗೆ ಕೊಲ್ಲೂರು ಮೂಕಾಂಬಿಕಾ ದೇವಿಯ ದರ್ಶನ ಪಡೆದು ಪೂಜೆಯಲ್ಲಿ ಭಾಗವಹಿಸಿ ವಾಪಸ್ ಆಗಲಿದ್ದಾರೆ. ಡಾ. ಪರವೇಶ್ವರ್ ಅವರು ಗೃಹ ಸಚಿವರಾದ ಬಳಿಕ ಇದೇ ಮೊದಲ ಬಾರಿಗೆ ಮಂಗಳೂರು, ಉಡುಪಿ ಪ್ರವಾಸ ಕೈಗೊಂಡಿದ್ದಾರೆ.

error: Content is protected !!