ಪೊಲೀಸ್ ಇಲಾಖೆ ಜನಸ್ನೇಹಿ ಆಗಬೇಕು. ಪೊಲೀಸ್ ಸಿಬ್ಬಂದಿಗೆ ಹಿರಿಯ ಅಧಿಕಾರಿಗಳು ತಿಳಿಹೇಳಬೇಕು. ಈ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಸೂಚನೆ ನೀಡಿದ್ದೇನೆ. ಠಾಣೆಯಲ್ಲಿ ದೂರು ಸ್ವೀಕರಿಸಲ್ಲ ಎಂಬ ದೂರುಗಳು ಬರಬಾರದು.
ನಾನು ಕೂಡ ಠಾಣೆಗಳಿಗೆ ಭೇಟಿ ನೀಡುತ್ತೇನೆ. ಸರ್ಕಾರ ಪೊಲೀಸರಿಗೆ ಎಲ್ಲಾ ರೀತಿಯಲ್ಲೂ ಸಹಕಾರ ನೀಡಲಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದರು.