ಕೂಗು ನಿಮ್ಮದು ಧ್ವನಿ ನಮ್ಮದು

ಚಿನ್ನ ಖರೀದಿಗಿದು ಪರ್ಫೆಕ್ಟ್ ಟೈಮ್, ಬಂಗಾರ ಬೆಲೆ ಇಳಿಕೆ: ಹೀಗಿದೆ ಇಂದಿನ ದರ

ಕೆಲ ದಿನಗಳಿಂದ ಚಿನ್ನ, ಬೆಳ್ಳಿ ದರಗಳ ಏರಿಳಿತಗಳ ಕಣ್ಣು ಮುಚ್ಚಾಲೆ ಆಟ ಮುಂದುವರೆದೇ ಇದೆ. ನಿನ್ನೆಗೆ ಹೋಲಿಸಿದರೆ ಇವತ್ತು ಆಭರಣ ಕೊಳ್ಳಬಯಸುವವರಿಗೆ ಪರ್ಫೆಕ್ಟ್ ಟೈಮ್ ಆಗಿದೆ. ಏಕೆಂದರೆ ಭಾರತದ ಮಾರುಕಟ್ಟೆಯಲ್ಲಿ ಪ್ರತಿ ಗ್ರಾಂ ಆಭರಣ ಚಿನ್ನದ ಮೇಲೆ ಹದಿನೈದು ರೂ. ಕುಸಿತವಾಗಿದೆ. ಇವತ್ತು ಭಾರತದ ಮಾರುಕಟ್ಟೆಯಲ್ಲಿ ಪ್ರತಿ ಗ್ರಾಂ ಆಭರಣ ಚಿನ್ನದ ಬೆಲೆ ರೂ. 4,800 ಆಗಿದೆ. ಈಗಾಗಲೇ ಭಾರತವು ಚಿನ್ನದ ಮೇಲಿನ ಆಮದು ಸುಂಕ ಹೆಚ್ಚಿಸಿದ್ದು ಮುಂಬರುವ ದಿನಗಳಲ್ಲಿ ಚಿನ್ನ ಮತ್ತೆ ಏರಿಕೆಯಾಗುವ ಸಾಧ್ಯತೆಯನ್ನೂ ಅಲ್ಲಗಳೆಯಲು ಆಗಲ್ಲ.

ಅಲ್ಲದೆ, ಕಳೆದ ಕೆಲ ಸಮಯದಿಂದ ಚಿನ್ನದ ಬೆಲೆಗಳಲ್ಲಿ ಅಲ್ಪ ಪ್ರಮಾಣದ ಏರಿಳಿತಗಳು ಆಗುತ್ತಲೇ ಇದ್ದು ಇದಕ್ಕೆ ಪ್ರಮುಖ ಕಾರಣ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಉಂಟಾಗುತ್ತಿರುವ ಮಾರುಕಟ್ಟೆ ಸಂಬಂಧಿತ ವಿದ್ಯಮಾನಗಳು ಹಾಗೂ ಕಚ್ಚಾ ತೈಲದಲ್ಲಾಗಿರುವ ಬೆಲೆ ಏರಿಕೆ ಹಾಗೂ ಇತರೆ ಜಾಗತಿಕ ಅಂಶಗಳೇ ಆಗಿವೆ. ಇನ್ನೂ, ಈ ಬಂಗಾರದ ಮೌಲ್ಯ ಜಾಗತಿಕ ಮಾರುಕಟ್ಟೆಯಲ್ಲೂ ಅಪಾರವಾಗಿದೆ. ಸಾಕಷ್ಟು ದೇಶಗಳು ವಿದೇಶಿ ವಿನಿಮಯ ರೂಪದಲ್ಲಿ ಚಿನ್ನದ ಸಂಗ್ರಹ ಹೊಂದಿರುವುದು ಎಲ್ಲರಿಗೂ ಗೊತ್ತೆ ಇದೆ, ಏಕೆಂದರೆ ಚಿನ್ನ ಎಲ್ಲ ದೇಶಗಳಲ್ಲೂ ಮಾನ್ಯತೆ ಪಡೆದಿದ್ದು ಎಲ್ಲರಿಂದಲೂ ಸ್ವೀಕರಿಸಲ್ಪಡುತ್ತದೆ.

ನವಜಾತ ಶಿಶು ಇರಲಿ ಅಥವಾ ಹೊಸದಾಗಿ ಮದುವೆ ಮಾಡಿಕೊಂಡ ದಂಪತಿಗಳಿರಲಿ ಅವರಲ್ಲಿ ಬಂಗಾರದ ಯಾವುದಾದರೂ ವಸ್ತು ಅಥವಾ ಸಿಂಗಾರದ ಸಾಮಾನು ಇದ್ದೇ ಇರುತ್ತದೆ. ಭಾರತದ ಮಾರುಕಟ್ಟೆಗಳಲ್ಲಿ ಇವತ್ತು ಚಿನ್ನ ಖರೀದಿ ಸಹಜ ಸಂಗತಿಯಾಗಿದ್ದು ದಿನದಲ್ಲೇ ಕೋಟ್ಯಂತರ ರೂಪಾಯಿಗಳಷ್ಟು ವ್ಯವಹಾರವನ್ನು ಈ ವ್ಯವಹಾರ ಹೊಂದಿದೆ. ಬೆಂಗಳೂರಿನಲ್ಲಿ ಇವತ್ತು ಪ್ರತಿ 10 ಗ್ರಾಂ ಆಭರಣ ಚಿನ್ನದ ಬೆಲೆ ರೂ. 48,050 ಆಗಿದೆ. ಮಾರುಕಟ್ಟೆಯಲ್ಲಿ ಇವತ್ತು ಒಂದು ಗ್ರಾಂ (1GM) 22 ಕ್ಯಾರೆಟ್ ಆಭರಣ ಚಿನ್ನದ ಬೆಲೆ ರೂ. 4,800 ಆಗಿದೆ. 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 5,236 ಆಗಿದೆ. ಇನ್ನು ಎಂಟು ಗ್ರಾಂ (8GM) 22 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 38,400 ಆಗಿದ್ದರೆ, 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 41,888 ಆಗಿದೆ.

10 ಗ್ರಾಂ (10GM) 22 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 48,000 ಆಗಿದ್ದು, 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 52,360 ಆಗಿದೆ. ಅಂತೆಯೇ ನೂರು ಗ್ರಾಂ (100GM) 22 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 4,80,000 ಆಗಿದ್ದು, 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 5,23,600 ಆಗಿದೆ. ಚಿನ್ನದಂತೆ ಸಾಮಾನ್ಯವಾಗಿ ಬೆಳ್ಳಿ ದರಗಳಲ್ಲೂ ವ್ಯತ್ಯಾಸ ಆಗುತ್ತಲೇ ಇರುತ್ತದೆ. ನಿನ್ನೆಗೆ ಹೋಲಿಸಿದರೆ ಇವತ್ತು ಭಾರತದಲ್ಲಿ ಬೆಳ್ಳಿ ಬೆಲೆಯಲ್ಲಿ ಅಲ್ಪ ಇಳಿಕೆ ಕಂಡುಬಂದಿದೆ. ಆದಾಗ್ಯೂ, ಕಳೆದ ತಿಂಗಳಿನಲ್ಲಿ ಅಂದರೆ ಜುಲೈ ಆರಂಭದಲ್ಲಿ ಬೆಳ್ಳಿಯ ಗರಿಷ್ಠ ಬೆಲೆ ಪ್ರತಿ ಕೆಜಿಗೆ ರೂ. 62,000 ಕ್ಕೆ ತಲುಪಿತ್ತು ಹಾಗೂ ಜುಲೈ 26 ರಂದು ಕನಿಷ್ಠ ಬೆಲೆ ರೂ. 54,500ಕ್ಕೆ ಕುಸಿದಿತ್ತು.

ಇದೀಗ ಈ ತಿಂಗಳಿನಲ್ಲಿ ಬೆಳ್ಳಿ ದರ ಯಾವ ರೀತಿ ಪ್ರದರ್ಶನ ತೋರಲಿದೆ ಎಂಬುದನ್ನು ಕಾದು ನೋಡಬೇಕಷ್ಟೆ. ಅಷ್ಟಕ್ಕೂ ಇಂದು ಭಾರತದ ಮಾರುಕಟ್ಟೆಯಲ್ಲಿ ಒಂದು ಕೆಜಿಗೆ ಬೆಳ್ಳಿ ಬೆಲೆ 57,800 ರೂ. ಆಗಿದೆ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಅವಲಂಬಿತವಾಗಿದ್ದು ಏರಿಕೆ, ಇಳಿಕೆಗಳು ಆಗುತ್ತಿರುತ್ತವೆ. ಅಲ್ಲದೆ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನವೂ ಸಹ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಲೇ ಇರುತ್ತದೆ.

ಬೆಂಗಳೂರು ನಗರದಲ್ಲಿ ಇಂದು ಪ್ರತಿ 10gm, 100gm, 1000gm (1ಕೆಜಿ) ಬೆಳ್ಳಿ ದರಗಳು ಕ್ರಮವಾಗಿ ರೂ. 634, ರೂ. 6,340 ಹಾಗೂ ರೂ. 63,400 ಗಳಾಗಿವೆ. ಇನ್ನುಳಿದಂತೆ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 63,400 ಆಗಿದ್ದರೆ ದೆಹಲಿಯಲ್ಲಿ ರೂ. 57,800 ಮುಂಬೈನಲ್ಲಿ ರೂ. 57,800 ಹಾಗೂ ಕೊಲ್ಕತ್ತದಲ್ಲೂ ರೂ. 57,800 ಗಳಾಗಿದೆ. ಜಿಎಸ್‍ಟಿ, ಟಿಸಿಎಸ್ ಹಾಗೂ ಇನ್ನಿತರೆ ಇರಬಹುದಾದ ಶುಲ್ಕಗಳನ್ನು ಒಳಗೊಂಡಿಲ್ಲ. ಹೆಚ್ಚು ನಿಖರ ಬೆಲೆಗಳಿಗಾಗಿ ನಿಮ್ಮ ಹತ್ತಿರದ ಆಭರಣ ವ್ಯಾಪಾರಿಗಳನ್ನು ಸಂಪರ್ಕಿಸಿ.

error: Content is protected !!