ಕೂಗು ನಿಮ್ಮದು ಧ್ವನಿ ನಮ್ಮದು

ನೌಕರರ ವೇತನ ಶೇ ಹದಿನೇಳರಷ್ಟು ಹೆಚ್ಚಿಸಿ ಅಧಿಕೃತ ಆದೇಶ ಹೊರಡಿಸಿದ ಸರ್ಕಾರ: ಯಾವಾಗಿನಿಂದ ಜಾರಿಗೆ

ಬೆಂಗಳೂರು: 7ನೇ ವೇತನ ಆಯೋಗ ವರದಿ ಜಾರಿಗೆ ಮಾಡುವಂತೆ ಪಟ್ಟು ಹಿಡಿದು ಮುಷ್ಕರ ನಡೆಸುತ್ತಿರುವ ರಾಜ್ಯ ನೌಕರರ ಶೇ.17ರಷ್ಟು ವೇತನ ಹೆಚ್ಚಳ ಮಾಡಿದ್ದು, 2023ರ ಏಪ್ರಿಲ್ 1ರಿಂದ ಅನ್ವಯ ಆಗುವಂತೆ ಅಧಿಕೃತ ಆದೇಶ ಹೊರಡಿಸಿದೆ.

ಅಧಿಕೃತ ಆದೇಶದಲ್ಲೇನಿದೆ?
ರಾಜ್ಯ ನೌಕರರ ಬೇಡಿಕೆಗಳನ್ನು ಈಡೇರಿಸುವ ಸಂಬಂಧ ಪರಿಶೀಲಿಸಲು 7ನೇ ವೇತನ ಆಯೋಗವನ್ನು ರಚಿಸಿ ಆದೇಶ ಹೊರಡಿಸಲಾಗಿರುತ್ತದೆ. ಪ್ರಸ್ತುತ ರಾಜ್ಯ ಸರ್ಕಾರಿ ನೌಕರರ ಬೇಡಿಕೆಗಳ ಹಿನ್ನೆಲೆಯಲ್ಲಿ ಸರ್ಕಾರದ ನೀತಿ ನಿರ್ಣಯದಂತೆ 7ನೇ ವೇತನ ಆಯೋಗದ ಅಂತಿಮ ವರದಿಯನ್ನು ಕಾಯ್ದಿರಿಸಿ, ರಾಜ್ಯ ಸರ್ಕಾರಿ ನೌಕರರಿಗೆ, ಸ್ಥಳೀಯ ಸಂಸ್ಥೆಗಳ ಮತ್ತು ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರಿಗೆ ಹಾಗೂ ವಿಶ್ವವಿದ್ಯಾಲಯಗಳ ಬೋಧಕೇತರ ಸಿಬ್ಬಂದಿಗಳಿಗೆ ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಲು ಸರ್ಕಾರವು ನಿರ್ಧರಿಸುತ್ತದೆ. ಅದರಂತೆ ಈ ಈ ಕೆಳಕಂಡ ಆದೇಶವನ್ನು ಹೊರಡಿಸಿದೆ.

error: Content is protected !!