ಬೆಂಗಳೂರು : 2024ರ ಲೋಕಸಭಾ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಸ್ಪರ್ಧಿಸ್ತಾರಾ? ಒಂದೊಮ್ಮೆ ಸ್ಪರ್ಧಿಸುವುದಾದರೂ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬಿತ್ಯಾದಿ ಪ್ರಶ್ನೆಗಳು ಅವರ ಪಕ್ಷದ ಕಾರ್ಯಕರ್ತರು ಹಾಗೂ ಅವರ ಅಭಿಮಾನಿಗಳಲ್ಲಿ ಮೂಡಿದೆ.
2024ರ ಲೋಕಸಭಾ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಸ್ಪರ್ಧಿಸುತ್ತಾರಾ ಎಂಬ ಜೆಡಿಎಸ್ ಕಾರ್ಯಕರ್ತರ ಗೊಂದಲಕ್ಕೆ ತೆರೆ ಎಳೆದಿರುವ ದೇವೇಗೌಡರ ಪುತ್ರ ಎಚ್.ಡಿ. ರೇವಣ್ಣ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಖಚಿತ ಎಂದು ಮಾಹಿತಿ ನೀಡಿದ್ದಾರೆ. ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಮಂತ್ರಿಗಳಾದ ಎಚ್.ಡಿ. ದೇವೇಗೌಡರು, ಮರಳಿ ಹಾಸನ ಲೋಕಸಭಾ ಅಖಾಡಕ್ಕೆ ಎಂಟ್ರಿ ಕೊಡುವ ಸೂಚನೆ ಈಗ ಸ್ಥಳೀಯ ಮುಖಂಡರಿಗೆ ದೊರಕಿದೆ. ಹಾಸಕ್ಕೆ ಮತ್ತೆ ದೇವೇಗೌಡರು ಎಂಬ ಮಾಹಿತಿಗೆ ಪುಷ್ಟಿ ನೀಡುವಂತೆ ಸಂಸದ ಪ್ರಜ್ವಲ್ ರೇವಣ್ಣ ಕ್ಷೇತ್ರ ಹುಡುಕಾಟ ನಡೆಸುತ್ತಿದ್ದು, ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧೆಗೆ ಪ್ರಜ್ವಲ್ ಹೆಚ್ಚಿನ ಒತ್ತಡ ಇದೆ. ಆದಾಗ್ಯೂ, ಈ ಬಗ್ಗೆ ಅವರಿಂದ ಯಾವುದೇ ಪ್ರತಿಕ್ರಿಯೆ ಲಭ್ಯವಾಗಿಲ್ಲ.
ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಮಂತ್ರಿ ಎಚ್.ಡಿ. ದೇವೇಗೌಡರು, ಕಳೆದ ಲೋಕಸಭೆ ಚುನಾವಣೆಯಲ್ಲಿ ಮೊಮ್ಮಗನಿಗಾಗಿ ಹಾಸನ ಲೋಕಸಭೆ ಟಿಕೆಟ್ ತ್ಯಾಗ ಮಾಡಿ ತುಮಕೂರು ಕ್ಷೇತ್ರದಿಂದ ಸ್ಪರ್ಧೆ ಮಾಡಿ ಸೋಲು ಅನುಭವಿಸಿದ್ದರು ಎಂಬ ಆರೋಪ ಕೇಳಿಬಂದಿತ್ತು. ಇದೀಗ ಈ ಆರೋಪದಿಂದ ಹೊರಬರಲು ತಾತನಿಗೆ ಕ್ಷೇತ್ರ ತ್ಯಾಗ ಮಾಡಲು ಸಜ್ಜಾಗಿರುವ ಪ್ರಜ್ವಲ್ ಬೇರೆ ಕ್ಷೇತ್ರ ಹುಡುಕಾಟ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.