ಬೆಂಗಳೂರು: ಸರಕಾರಿ ಶಾಲಾ ಮಕ್ಕಳಿಗೆ ಸಮವಸ್ತ್ರ ಮತ್ತು ಶೂ ನೀಡುವ ವಿಚಾರದಲ್ಲಿ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿರುವುದನ್ನು ಪ್ರಸ್ತಾಪಿಸಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸರಕಾರವನ್ನು ಟ್ವಿಟರ್ ಮೂಲಕ ಕುಟುಕಿದ್ದಾರೆ. ಸರಕಾರಿ ಶಾಲಾ ಮಕ್ಕಳಿಗೆ ಸಮವಸ್ತ್ರ ನೀಡುವ ಕಾರ್ಯಕ್ರಮವನ್ನೂ ಸರಿಯಾಗಿ ಮಾಡದೆ, ಹೈಕೋರ್ಟ್ನಿಂದ ಛೀಮಾರಿ ಹಾಕಿಸಿಕೊಳ್ಳುವ ಮಟ್ಟಕ್ಕೆ ನಮ್ಮ ಸರಕಾರ ಇಳಿಯತೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರೇ? ಧಮ್, ತಾಕತ್ತು ಎಂದು ಭಾಷಣಗೈಯುವ ತಮಗೆ ಅಗತ್ಯ ಸಮವಸ್ತ್ರ ಪೂರೈಸುವ ಪರಿಜ್ಞಾನವಿಲ್ಲದೆ ಹೋಯಿತೇ?
ಎರಡು ಜೊತೆ ಸಮವಸ್ತ್ರ, ಒಂದು ಜೊತೆ ಶೂ ಮತ್ತು ಎರಡು ಜತೆ ಸಾಕ್ಸ್ ನೀಡುವಂತೆ ಹೈಕೋರ್ಟ್ ನೀಡಿದ್ದ ಆದೇಶವನ್ನು ಸರಿಯಾಗಿ ನಿರ್ವಹಿಸಲು ಆಗದ ಕೆಟ್ಟ ಸರಕಾರವಿದು. ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರೇ ಸರಕಾರಿ ಶಾಲಾ ಮಕ್ಕಳ ವಿಷಯವೆಂದರೆ ಅಷ್ಟು ಸದರವೆ? ನ್ಯಾಯಾಂಗ ನಿಂದನೆಯ ಜತೆಗೆ ಈ ಉದಾಸೀನ ಧೋರಣೆ ಖಂಡನೀಯ ಎಂದಿದ್ದಾರೆ