ಕೂಗು ನಿಮ್ಮದು ಧ್ವನಿ ನಮ್ಮದು

ಚನ್ನಪಟ್ಟಣದಲ್ಲಿ ಇಂದು ಹೆಚ್ಡಿ ಕುಮಾರಸ್ವಾಮಿ ಪ್ರಚಾರ

ರಾಮನಗರ: ಹೆಚ್ಡಿ ಕುಮಾರಸ್ವಾಮಿ ಅವರು ಇಂದು ಸ್ವಕ್ಷೇತ್ರ ಚನ್ನಪಟ್ಟಣ ಕ್ಷೇತ್ರದಲ್ಲಿ ಮತಬೇಟೆಯಾಡಲಿದ್ದಾರೆ. ಚನ್ನಪಟ್ಟಣದಲ್ಲಿ ಬೃಹತ್ ಬೈಕ್ ರ್ಯಾಲಿ ಹಮ್ಮಿಕೊಳ್ಳಲಾಗಿದೆ. ಚನ್ನಪಟ್ಟಣದ ಶೇರ್ವಾ ಸರ್ಕಲ್ ನಿಂದ ಮಂಗಳವಾರಪೇಟೆವರೆಗೂ ಬೃಹತ್ ಬೈಕ್ ರ್ಯಾಲಿ ನಡೆಯಲಿದೆ. ಹೆಚ್ಡಿ ಕುಮಾರಸ್ವಾಮಿಗೆ ತಂದೆ ಹೆಚ್ಡಿ ದೇವೇಗೌಡ, ಪುತ್ರ ನಿಖಿಲ್ ಸಾಥ್ ನೀಡಲಿದ್ದಾರೆ. ಸಾವಿರಾರು ಕಾರ್ಯಕರ್ತರು ಬೈಕ್ ರ್ಯಾಲಿಯಲ್ಲಿ ಭಾಗಿಯಾಗಲಿದ್ದಾರೆ. ನಂತರ ಮಧ್ಯಾಹ್ನ 1 ಗಂಟೆಗೆ ಕನಕಪುರ ಜೆಡಿಎಸ್ ಅಭ್ಯರ್ಥಿ ಪರ ಹೆಚ್ಡಿ ಕುಮಾರಸ್ವಾಮಿ ಪ್ರಚಾರ ಮಾಡಲಿದ್ದಾರೆ.

ಬಳಿಕ ಮಧ್ಯಾಹ್ನ 3 ಗಂಟೆಗೆ ರಾಮನಗರ ಜೆಡಿಎಸ್ ಅಭ್ಯರ್ಥಿ ನಿಖಿಲ್ ಪರ ಪ್ರಚಾರ ನಡೆಸಲಿದ್ದಾರೆ. ಇನ್ನು ಇಂದು ರಾಮನಗರ, ಕನಕಪುರದಲ್ಲಿ ಡಿ.ಕೆ.ಶಿವಕುಮಾರ್‌ ಮತಯಾಚನೆ ಮಾಡಲಿದ್ದಾರೆ

error: Content is protected !!