ಕೂಗು ನಿಮ್ಮದು ಧ್ವನಿ ನಮ್ಮದು

ಬಿ.ಎಸ್.ಯಡಿಯೂರಪ್ಪನ ಆಪ್ತನ ಮನೆ ಮೇಲೆ ನಡೆದಿದ್ದ ಐಟಿ ದಾಳಿಗೆ ಹೆಚ್‍.ಡಿ.ಕುಮಾರಸ್ವಾಮಿ ಹೊಸ ಬಾಂಬ್

ಮೈಸೂರು: ಇತ್ತೀಚೆಗೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರ ಮನೆ ಮೇಲೆ ನಡೆದಿದ್ದ ಆದಾಯ ತೆರಿಗೆ ಇಲಾಖೆ ಐಟಿ ದಾಳಿ ಪ್ರಕರಣ ಸಂಬಂಧ ಹೆಚ್.ಡಿ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ರು. ಇವತ್ತು ಚಾಮುಂಡಿ ತಾಯಿ ಬೆಟ್ಟದಲ್ಲಿ ಮಾದ್ಯಮದವರ ಜೊತೆಗೆ ಮಾತನಾಡುತ್ತಿದ್ದ ಸಂದರ್ಭದಲ್ಲಿ ಐಟಿ ದಾಳಿ ಬಗ್ಗೆ ಹೆಚ್‍.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ರು. ಐಟಿ ದಾಳಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕಾರಣ. ಸಿದ್ದರಾಮಯ್ಯ ಯಡಿಯೂರಪ್ಪರನ್ನು ಭೇಟಿ ಮಾಡಿರುವುದೇ ಐಟಿ ದಾಳಿಗೆ ಪ್ರಮುಖ ಕಾರಣ ಎಂದು ಹೆಚ್ಡಿಕೆ ಆರೋಪಿಸಿದ್ರು.

ವಿಪಕ್ಷ ನಾಯಕ ಸಿದ್ದರಾಮಯ್ಯ ಪರವಾಗಿ ಏನು ಬೇಕಾದ್ರು ಮಾಡುತ್ತಾರೆ. ಬಿ.ಎಸ್.ಯಡಿಯೂರಪ್ಪ ಭೇಟಿ ಸಹ ಅದರ ಭಾಗವಾಗಿದೆ. ಹೇಗಾದ್ರು ಸರಿ ಸಿದ್ದರಾಮಯ್ಯಗೆ ಅಧಿಕಾರ ಬೇಕು. ಈ ಭೇಟಿ ಬಗ್ಗೆ ಕೇಂದ್ರಕ್ಕೂ ಮಾಹಿತಿ ಸಿಕ್ಕಿದೆ. ಅದಕ್ಕಾಗಿ ಬಿ.ಎಸ್.ಯಡಿಯೂರಪ್ಪ ಅವರನ್ನು ಕಪಿಮುಷ್ಠಿಯಲ್ಲಿಟ್ಟುಕೊಳ್ಳಲು ಐಟಿ ದಾಳಿ ನಡೆದಿದೆ. ಒಟ್ಟಿನಲ್ಲಿ ಈ ಐಟಿ ದಾಳಿ ಹಿಂದೆ ಸ್ಪಷ್ಟವಾಗಿ ರಾಜಕೀಯ ಉದ್ದೇಶ ಇದೆ. ಇದರ ಬಗ್ಗೆ ಅನುಮಾನ ಇಲ್ಲ ಎಂದ್ರು.

ಇದೇ ವೇಳೆ ಸಿಂಧಗಿ ಉಪಚುನಾವಣೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಅಲ್ಲಿ ಕಾಂಗ್ರೆಸ್ ಪಕ್ಷ ಲೆಕ್ಕಕ್ಕೆ ಇಲ್ಲ. ಅಲ್ಲಿ ಕಾಂಗ್ರೆಸ್ ಯಾವಾಗಲೂ ೩ನೇ ಸ್ಥಾನದಲ್ಲಿದೆ. ಅಲ್ಲೇನಿದ್ರು BJP ಮತ್ತು JDS ನಡುವೆ ಪೈಪೋಟಿ. ನಾವು ಯೋಚನೆ ಮಾಡಿ ಅಭ್ಯರ್ಥಿ ಹಾಕಿದ್ದೇವೆ. ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಪಾಠ ಕಲಿಸಲು ಈ ಅಭ್ಯರ್ಥಿ ಹಾಕಿದ್ದೇವೆ. ಸಿದ್ದರಾಮಯ್ಯ ಯಾವ ದೊಣ್ಣೆ ನಾಯಕ ಅಂತಾ ಅವರು ಹೇಳಿದ ಅಭ್ಯರ್ಥಿ ಹಾಕಬೇಕು. ೨ ಕ್ಷೇತ್ರದಲ್ಲಿ JDS ಗಂಭೀರವಾಗಿ ಸ್ಪರ್ಧೆ ಮಾಡಲಿದೆ ಎಂದು ಹೆಚ್‍.ಡಿ.ಕುಮಾರಸ್ವಾಮಿ ತಿಳಿಸಿದ್ರು.

error: Content is protected !!