ಕೂಗು ನಿಮ್ಮದು ಧ್ವನಿ ನಮ್ಮದು

ಪ್ರವಾಸಿಗರ ಆಕರ್ಷಣೆಗೆ ನಿರ್ಮಾಣವಾಗಿದ್ದ ಮಲ್ಪೆಯ ತೇಲುವ ಸೇತುವೆ ಸ್ಥಗಿತ

ಉಡುಪಿ: ಅರಬ್ಬೀ ಸಮುದ್ರದ ಅಬ್ಬರ ಜೋರಾಗಿರುವುದರಿಂದ ಮಲ್ಪೆ ಬೀಚ್ ನಲ್ಲಿ ಪ್ರವಾಸಿಗರ ಆಕರ್ಷಣೆಗೋಸ್ಕರ ನಿರ್ಮಾಣವಾಗಿದ್ದ ತೇಲುವ ಸೇತುವೆ ವಾಟರ್ ಸ್ಪೋರ್ಟ್ಸ್ ನ್ನು ಸ್ಥಗಿತ ಮಾಡಲಾಗಿದೆ. ರಾಜ್ಯದಲ್ಲಿಯೇ ಮೊದಲ ಬಾರಿಗೆ ನಿರ್ಮಾಣವಾಗಿದ್ದ ಸಮುದ್ರದ ತೇಲುವ ಸೇತುವೆ, ಮಲ್ಪೆ ಬೀಚ್‍ನ ಪ್ರಮುಖ ಆಕರ್ಷಣೆಯಾಗಿತ್ತು. ಕಳೆದ ಮೂರು ದಿನಗಳಿಂದ ಸಾವಿರಾರು ಪ್ರವಾಸಿಗರು ಬಂದು ಮೋಜುಮಸ್ತಿಯಲ್ಲಿ ತೊಡಗಿದ್ದರು.

ಸಮುದ್ರದ ಅಬ್ಬರ ಜಾಸ್ತಿ ಇರುವುದರಿಂದ ತೇಲುವ ಸೇತುವೆ ಸೇರಿದಂತೆ ಎಲ್ಲಾ ವಾಟರ್ ಸ್ಪೋರ್ಟ್ಸ್ ಗಳನ್ನು ಸ್ಥಗಿತ ಮಾಡುವುದಾಗಿ ಮಲ್ಪೆ ಬೀಚ್ ಅಭಿವೃದ್ಧಿ ಸಮಿತಿ ಹೇಳಿದೆ.
ಸೇತುವೆಯ ಬಿಡಿಭಾಗಗಳನ್ನು ಮೇಲಕ್ಕೆತ್ತುವ ಸಂದರ್ಭದಲ್ಲಿ ಸ್ಥಳೀಯರು ವೀಡಿಯೋ ಮಾಡಿದ್ದು ಸೇತುವೆ ಮುರಿದಿದೆ ಎಂದು ವೀಡಿಯೋಗಳನ್ನು ಹರಿಬಿಟ್ಟಿದ್ದಾರೆ. ತೇಲುವ ಸೇತುವೆಗೆ ಯಾವುದೇ ಸಮಸ್ಯೆಗಳು ಆಗಿಲ್ಲ, ಬೀಚ್ ಅಭಿವೃದ್ಧಿ ಸಮಿತಿಯವರು ಅಲೆಗಳ ಅಬ್ಬರ ಜಾಸ್ತಿ ಇರುವುದರಿಂದ ಫ್ಲೋಟಿಂಗ್ ಬ್ರಿಡ್ಜ್ ಮೇಲಕ್ಕೆತ್ತಲಾಗಿದೆ ಎಂದು ಸ್ಪಷ್ಟನೆ ಕೊಟ್ಟಿದ್ದಾರೆ.

error: Content is protected !!