ಚಿಕ್ಕಬಳ್ಳಾಪುರ: ಜಿಲ್ಲೆಯ ಗೌರಿಬಿದನೂರಿನ ನ್ಯಾಷನಲ್ ಕಾಲೇಜಿನಲ್ಲಿ ಹಿಜಬ್ಗಾಗಿ ಪಟ್ಟು ಹಿಡಿದ ಹಲವು ವಿದ್ಯಾರ್ಥಿನಿಯರನ್ನು ಮನವೊಲಿಸುವಲ್ಲಿ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಹದಿಮೂರು ಜನ ವಿದ್ಯಾರ್ಥಿಗಳು ಬುರ್ಖಾ ಸಮೇತ ಹಿಜಾಬ್ ಧರಿಸಿ ಕಾಲೇಜಿಗೆ ಆಗಮಿಸಿದ್ರು. ಹಾಗಾಗಿ ಹಿಜಾಬ್ ಧರಿಸಿ ಆಗಮಿಸಿದವರಿಗೆ ಪ್ರತ್ಯೇಕ ಕೊಠಡಿಯಲ್ಲಿ ಹಿಜಾಬ್ ತೆಗದು ಸಮವಸ್ತ್ರದಲ್ಲಿ ತರಗತಿಗೆ ಹೊಗುವಂತೆ ಸೂಚಿಸಲಾಗಿತ್ತು. ಆದ್ರೆ ವಿದ್ಯಾರ್ಥಿಗಳು ನಾವು ಹಿಜಾಬ್ ತೆಗೆಯುವುದಿಲ್ಲ.
ನಾವು ಹಾಗೆಯೇ ತರಗತಿಗೆ ಹೋಗುತ್ತೇವೆ ಎಂದು ಪಟ್ಟು ಹಿಡಿದಿದ್ರು. ಅಧಿಕಾರಿಗಳು ಒಂದು ಗಂಟೆಗೂ ಹೆಚ್ಚು ಕಾಲ ವಿದ್ಯಾರ್ಥಿಗಳ ಜೊತೆ ಸಮಾಲೋಚನೆಯನ್ನು ನಡೆಸಿ ನ್ಯಾಯಾಲಯದ ಆದೇಶ ಮತ್ತು ಸರ್ಕಾರದ ನಿರ್ಧಾರದ ಬಗ್ಗೆ ಗಮನಕ್ಕೆ ತಂದು ವಿದ್ಯಾರ್ಥಿನಿಯರನ್ನು ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೊನೆಗೆ ಹಿಜಾಬ್ ತೆಗೆದು ವಿದ್ಯಾರ್ಥಿಗಳು ತರಗತಿಗೆ ತೆರಳಿದ್ದಾರೆ. ಇನ್ನೂ ಕೆಲ ಜಿಲ್ಲೆಯ ಬಹುತೇಕ ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಧರಿಸಿ ಬಂದಿರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿ ಮೀಸಲಿರಿಸಿ ಕೊಠಡಿಯಲ್ಲಿ ಹಿಜಾಬ್ ತೆಗೆದು ಬಳಿಕ ತರಗತಿಗೆ ತೆರಳಲು ಅವಕಾಶ ಮಾಡಿಕೊಡಲಾಗುತ್ತಿದೆ.