ಬೆಳಗಾವಿ: ನಗರದ ಲಿಂಗರಾಜ ಕಾಲೇಜಿನಲ್ಲಿ ನಡೆಯುತ್ತಿರುವ ಆಂತರಿಕ ಪರೀಕ್ಷೆಗೆ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ನೀಡುತ್ತಿಲ್ಲ ಎಂದು ಆಗ್ರಹಿಸಿ ನಾಲವತ್ತಕ್ಕೂ ಅಧಿಕ ವಿದ್ಯಾರ್ಥಿನಿಯರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ.
ಹಿಜಾಬ್ ನಮ್ಮ ಹಕ್ಕು, ನಮ್ಮ ಧರ್ಮ ಪಾಲನೆ, ಜೊತೆಗೆ ಶಿಕ್ಷಣವು ಮುಖ್ಯ. ನಾವು ಭಾರತೀಯರು ಮೊದಲಿನಿಂದಲೂ ಹಿಜಾಬ್ ಧರಿಸಿಕೊಂಡೇ ಕಾಲೇಜಿಗೆ ತೆರಳಿ ಪರೀಕ್ಷೆ ಬರೆಯುತ್ತಿದ್ದೆವು.
ಆದ್ರೆ ಇವತ್ತು ಏಕಾಏಕಿ ಕಾಲೇಜಿನ ಆಡಳಿತ ಮಂಡಳಿ ಹಿಜಾಬ್ ತೆಗೆದು ಪರೀಕ್ಷೆ ಬರೆಯುವಂತೆ ಹೇಳಿದ್ರು. ಎಂದು ವಿದ್ಯಾರ್ಥಿನಿಯರು ಆರೋಪಿಸಿದ್ರು. ಲಿಂಗರಾಜ ಪದವಿ ಮಹಾವಿದ್ಯಾಲಯದಲ್ಲಿ ಯಾವುದೇ ಸಮವಸ್ತ್ರವಿಲ್ಲ. ಆದ್ರೆ ಕಾಲೇಜು ಆಡಳಿತ ಮಂಡಳಿಯವರು ನಮ್ಮ ವಿರುದ್ಧ ನಡೆದುಕೊಳ್ಳುತ್ತಿರುವುದು ನಮ್ಮ ಶಿಕ್ಷಣಕ್ಕೆ ತೊಂದರೆಯಾಗುತ್ತಿದೆ.
ಹೀಗಾಗಿ ಕೂಡಲೇ ಜಿಲ್ಲಾಧಿಕಾರಿಗಳು ಮಧ್ಯಪ್ರವೇಶಿಸಿ ಲಿಂಗರಾಜ ಕಾಲೇಜಿನ ಆಡಳಿತ ಮಂಡಳಿಯರೊಂದಿಗೆ ಮಾತುಕತೆ ನಡೆಸಿ ಹಿಜಾಬ್ ಧರಿಸಲು ಅನುಮತಿ ನೀಡುವಂತೆ ಸೂಚಿಸುವಂತೆ ವಿದ್ಯಾರ್ಥಿಗಳು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಲಿಂಗರಾಜ ಪದವಿ ಮಹಾವಿದ್ಯಾಲಯದ ನಾಲವತ್ತಕ್ಕೂ ಅಧಿಕ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.