ಬೆಂಗಳೂರು: ಇಂದಿನಿಂದ ಮೂರು ದಿನಗಳ ಕಾಲ ಸಿಇಟಿ ಪರೀಕ್ಷೆ ನಡೆಯಲಿದೆ. ಪರೀಕ್ಷೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ.ಹಲವು ಪರೀಕ್ಷೆಗಳ ಅಕ್ರಮ ಹಿನ್ನೆಲೆಯಲ್ಲಿ ಸಿಇಟಿಯಲ್ಲೂ ಅಕ್ರಮಗಳನ್ನು ತಡೆಯಲು ನೀಟ್ ಮಾದರಿಯ ನಿಯಮ ಜಾರಿ ಮಾಡಲಾಗಿದೆ. ಅಷ್ಟೇ ಅಲ್ಲದೇ ಸಿಇಟಿ ಪರೀಕ್ಷೆಗೆ ಭಾರೀ ಟಫ್ ರೂಲ್ಸ್ ಜಾರಿ ಮಾಡಲಾಗಿದೆ.
ಪರೀಕ್ಷಾ ಕೇಂದ್ರಕ್ಕೆ ಹಿಜಾಬ್ ನಿಷೇಧಿಸಲಾಗಿದ್ದು, ಇದರ ಜೊತೆಗೆ ತಲೆ ಮತ್ತು ಕಿವಿ ಮುಚ್ಚಿಕೊಳ್ಳುವ ವಸ್ತ್ರ ಧರಿಸಬಾರದು. ವಿದ್ಯಾರ್ಥಿಗಳು ಹಾಫ್ ಶರ್ಟ್ ಮಾತ್ರ ಧರಿಸಬೇಕು. ಜೊತೆಗೆ ವಾಚ್ ಧರಿಸುವಂತಿಲ್ಲ. ಕೋವಿಡ್ ಮಾರ್ಗಸೂಚಿಯನ್ನು ಪರೀಕ್ಷಾ ಕೇಂದ್ರಕ್ಕೆ ಬರುವ ಪ್ರತಿಯೊಬ್ಬರೂ ಅನುಸರಿಸಬೇಕು. ಅಷ್ಟೇ ಅಲ್ಲದೇ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಸೂಚಿಸಿದೆ. ಹಲವು ಪರೀಕ್ಷೆಗಳ ಅಕ್ರಮ ಹಿನ್ನೆಲೆಯಲ್ಲಿ ಸಿಇಟಿಯಲ್ಲೂ ಅಕ್ರಮಗಳನ್ನು ತಡೆಯಲು ನೀಟ್ ಮಾದರಿಯ ನಿಯಮ ಜಾರಿ ಮಾಡಲಾಗಿದೆ. ಅಷ್ಟೇ ಅಲ್ಲದೇ ಸಿಇಟಿ ಪರೀಕ್ಷೆಗೆ ಭಾರೀ ಟಫ್ ರೂಲ್ಸ್ ಜಾರಿ ಮಾಡಲಾಗಿದೆ.
ಪರೀಕ್ಷಾ ಕೇಂದ್ರಗಳಲ್ಲಿ ಪೊಲೀಸ್ ಭದ್ರತೆ ಮಾಡಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮವಹಿಸಲು ಪೊಲೀಸರನ್ನು ನಿಯೋಜಿಸಲಾಗಿದೆ. ಅಷ್ಟೇ ಅಲ್ಲದೇ ಖಜಾನೆಯಿಂದ ಪರೀಕ್ಷಾ ಕೇಂದ್ರಕ್ಕೆ ಪ್ರಶ್ನೆ ಪತ್ರಿಕೆ ತಲುಪುವವರೆಗೂ ವೀಡಿಯೋ ಚಿತ್ರೀಕರಣವನ್ನು ಮಾಡಲಾಗುವುದು. ನೀಟ್ ಮಾದರಿಯಲ್ಲಿ ಪರೀಕ್ಷೆಗೆ ನಿಯಮ ಜಾರಿಯಾಗಿದ್ದು, ಮೊದಲ ದಿನ ಜೀವಶಾಸ್ತ್ರ ಮತ್ತು ಗಣಿತ ವಿಷಯಗಳ ಪರೀಕ್ಷೆ ಬೆಳಗ್ಗೆ 10.30ಕ್ಕೆ ನಡೆಯಲಿದೆ. ಬೆಂಗಳೂರಿನಲ್ಲಿ 87 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿವೆ.