ಹುಬ್ಬಳ್ಳಿ: ೭೫ನೇ ಸ್ವಾತಂತ್ರೋತ್ಸವ ಸಂಭ್ರಮದ ಹಿನ್ನಲೆಯಲ್ಲಿ ಕಲಘಟಗಿ ಪಟ್ಟಣದಲ್ಲಿ ವಿನೂತನ ರೀತಿಯಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಗಿದ್ದು, ಇದೆ ವೇಳೆಯಲ್ಲಿ ಬೃಹತ್ ತ್ರಿವರ್ಣ ಧ್ವಜದ ಮೆರವಣಿಗೆಯನ್ನು ಮಾಡುವ ಮೂಲಕ ಕೋವಿಡ್ ನಿಯಮವನ್ನು ಉಲ್ಲಂಘನೆ ಮಾಡಲಾಗಿದ್ದಾರೆ. ಕಲಘಟಗಿಯ ತಡಸ ಕ್ರಾಸ್‍ನಿಂದ ಮಾಜಿ ಸಚಿವ ಸಂತೋಷ್ ಲಾಡ್ ನೇತೃತ್ವದಲ್ಲಿ ಎರಡು ಕಿ.ಮೀ ಉದ್ದ ಒಂಬತ್ತು ಅಡಿ ಅಗಲದ ತ್ರಿವರ್ಣ ಧ್ವಜವನ್ನು ಮೆರವಣಿಗೆ ಮಾಡಲಾಗಿದ್ದಾರೆ.
ಈ ಮೆರವಣಿಗೆಯಲ್ಲಿ ಸುಮಾರು ಹತ್ತು ಸಾವಿರಕ್ಕೂ ಹೆಚ್ಚಿನ ಜನ ಸೇರಿದ್ದು, ಬಳಿಕ ಎಲ್ಲರೂ ಮಾಸ್ಕ್ ಧರಿಸದೇ, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದೇ ಕೋವಿಡ್ ರೂಲ್ಸ್ ಅನ್ನು ಬ್ರೇಕ್ ಮಾಡಿದ್ದಾರೆ. ರಾಜ್ಯದಲ್ಲಿ ಈಗಾಗಲೇ ಕೋವಿಡ್ ಮೂರನೇ ಅಲೆಯ ಭೀತಿ ಆರಂಭವಾಗಿದ್ದು, ಈ ಬಗ್ಗೆ ಸರ್ಕಾರ ಕಟ್ಟು ನಿಟ್ಟಿನ ಕ್ರಮ ಜಾರಿಗೊಳಿಸಲು ಯೋಚನೆ ನಡೆಸುತ್ತಿದೆ. ಅಲ್ಲದೇ ಸಭೆ, ಸಮಾರಂಭ, ಅಂತ್ಯಸಂಸ್ಕಾರಗಳಲ್ಲಿ ಸೀಮಿತ ಜನ ಮಾತ್ರ ಭಾಗವಹಿಸಬೇಕೆಂದು ಸೂಚಿಸಿದೆ. ಒಂದು ವೇಳೆ ರಾಜ್ಯದಲ್ಲಿ ಮತ್ತೆ ಕೋವಿಡ್ ಪ್ರಕರಣ ಹೆಚ್ಚಾದ್ರೆ ಲಾಕ್‍ಡೌನ್ ಘೋಷಿಸುವ ಎಚ್ಚರಿಕೆಯನ್ನು ಕೂಡ ನೀಡಿದೆ.