ಕೂಗು ನಿಮ್ಮದು ಧ್ವನಿ ನಮ್ಮದು

ಐಪಿಎಲ್ ಬೆಟ್ಟಿಂಗ್ ನಲ್ಲಿ ತೊಡಗಿದ್ದ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಬಂಧನ

ಚಿಕ್ಕಬಳ್ಳಾಪುರ: ಐಪಿಎಲ್ ಬೆಟ್ಟಿಂಗ್ ನಲ್ಲಿ ತೊಡಗಿದ್ದ ಪೊಲೀಸ್ ಸಿಬ್ಬಂದಿಯನ್ನೇ ಚಿಕ್ಕಬಳ್ಳಾಪುರ ಪೊಲೀಸರು ಖೆಡ್ಡಾಗೆ ಬೀಳಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲಾ ಅಪರಾಧ ವಿಭಾಗದ ಹೆಡ್ ಕಾನ್ಸ್ಟೇಬಲ್ ಮಂಜುನಾಥ್,  ಆನ್ಲೈನ್ ನಲ್ಲಿ ಐಪಿಎಲ್ ಬೆಟ್ಟಿಂಗ್ ನಲ್ಲಿ ತೊಡಗಿದ್ದಾಗ ಖಚಿತ ಮಾಹಿತಿ ಮೇಲೆ ದಾಳಿ ನಡೆಸಲಾಗಿದ್ದು, ಚಿಂತಾಮಣಿ ನಗರ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಪೇದೆ ಮಂಜುನಾಥ್ ಅರೆಸ್ಟ್ ಮಾಡಲಾಗಿದೆ. ಜಿಲ್ಲಾ ಅಪರಾಧ ವಿಭಾಗ ಹಾಗೂ ಚಿಂತಾಮಣಿ ನಗರ ಠಾಣೆಯಲ್ಲಿ ಸೈಬರ್ ಕ್ರೈಂ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಮಂಜುನಾಥ್ ಐಪಿಎಲ್ ಬೆಟ್ಟಿಂಗ್ ನಲ್ಲಿ ತೊಡಗಿ ಸಿಕ್ಕಿಹಾಕಿಕೊಂಡಿದ್ದಾನೆ. ಇನ್ನು ಮಂಜುನಾಥ್ ನನ್ನ ಬಂಧಿಸಿದ ಚಿಂತಾಮಣಿ ಪೊಲೀಸರು, ನ್ಯಾಯಾಧೀಶರ ಮುಂದೆ ಹಾಜರು ಪಡಿಸಿ,  ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಈ ಕುರಿತು  ಚಿಂತಾಮಣಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಚಿಕ್ಕಬಳ್ಳಾಪುರ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್, ಆರೋಪಿ ಪೇದೆ ಮಂಜುನಾಥ್ ನನ್ನ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

error: Content is protected !!