ಪಣಜಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಕುರಿತು ತೀವ್ರವಾಗಿ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ಬಿಜೆಪಿಯ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಅಚ್ಚರಿಯ ಹೇಳಿಕೆಯನ್ನು ನೀಡಿದ್ದಾರೆ. ಇನ್ನೂ ಕರ್ನಾಟಕದಲ್ಲಿ ಸಿಎಂ ಬಿ.ಎಸ್ ಯಡಿಯೂರಪ್ಪನವರು ಚೆನ್ನಾಗಿ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಯಾವುದೇ ರಾಜಕೀಯ ಬದಲಾವಣೆಗಳು ಇಲ್ಲ ಎಂದು ಸ್ಪಷ್ಟಪಡಿಸಿದ್ರು. ಇನ್ನೂ ಈ ವಿಷಯಕ್ಕೆ ಸಂಬಂಧ ಪಟ್ಟಂತೆ
ಗೋವಾದಲ್ಲಿ ಮಾತನಾಡಿರುವ ನಡ್ಡಾ ಅವರು, ಮುಖ್ಯಮಂತ್ರಿ ಯಡಿಯೂರಪ್ಪನವರು ಚೆನ್ನಾಗಿ ಕೆಲಸ ಮಾಡುತ್ತಿದ್ದಾರೆ. ಅವರ ನಾಯಕತ್ವದದಲ್ಲಿ ಸರ್ಕಾರ ಜನಪರ ಕಾರ್ಯಗಳನ್ನು ಮಾಡುತ್ತಿದೆ. ಜೊತೆಗೆ ನಾವು ಎಲ್ಲವನ್ನೂ ನೋಡುತ್ತಿದ್ದೇವೆ. ರಾಜಕೀಯ ಬೆಳವಣಿಗೆ ಹಾಗೂ ನಾಯಕತ್ವದ ಬದಲಾವಣೆಯ ಕುರಿತು ಯಾವುದೇ ಚರ್ಚೆಗಳು ಇಲ್ಲಿ ನಡೆಯುತ್ತಿಲ್ಲ ಎಂದು ನಡ್ಡಾ ಹೇಳಿದ್ದಾರೆ.
ಇನ್ನೂ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತು ಚರ್ಚೆಗಳು ನಡೆಯುತ್ತಿರುವಾಗಲೇ ಮುರುಗೇಶ್ ನಿರಾಣಿಯವರು ದೆಹಲಿಗೆ ಹಾರಿದ್ದು, ಇತ್ತ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಯವರು ಬೆಂಗಳೂರಿನಲ್ಲಿದ್ರು ಅಜ್ಞಾತ ಸ್ಥಳದಲ್ಲಿದ್ದಾರೆ, ಎಂಬ ಮಾಹಿತಿ ಕೂಡ ಲಭ್ಯವಾಗಿದೆ. ಇದರ ಮಧ್ಯೆ ಯಾವುದರ ಬಗ್ಗೆಯೂ ತಲೆ ಕೆಡಿಸಿಕೊಳ್ಳದ ಮುಖ್ಯಮಂತ್ರಿ, ಬೆಳಗಾವಿಯ ಪ್ರವಾಹ ಪೀಡಿತ ಜಿಲ್ಲೆಗಳ ಪ್ರವಾಸವನ್ನು ಇವತ್ತು ಕೈಗೊಂಡಿದ್ದಾರೆ. ಇನ್ನೂ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿರುವ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಪರೋಕ್ಷವಾಗಿ ಹೈಕಮಾಂಡ್ಗೆ ಶಾಕ್ ನೀಡಿದ್ರಾ? ಅನ್ನೋ ಪ್ರಶ್ನೆ ಎಲ್ಲೆಡೆ ಮೂಡಿಡೆ. ಇವತ್ತು ೩ ಬಾರಿ ಒಂದೇ ಹೇಳಿಕೆಯನ್ನು ಕೊಟ್ಟಿರುವ ಮುಖ್ಯಮಂತ್ರಿ ಬಿ.ಎಸ್.ವೈ, ಕಾದು ನೋಡೋಣ ಅಂತ ಹೇಳುವ ಮೂಲಕ ಹೈಕಮಾಂಡ್ಗೆ ಸಂದೇಶ ರವಾನಿಸಿದ್ರಾ? ಎಂಬ ಚರ್ಚೆಗಳು ಕಮಲ ಪಾಳಯದಲ್ಲಿ ಕೇಳಿ ಬರುತ್ತಿವೆ. ಇನ್ನೂ ಕಾದು ನೋಡೋಣ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ಜೆ.ಪಿ.ನಡ್ಡಾ ನಮ್ಮ ಪರವಾಗಿದ್ದಾರೆ. ನಮ್ಮ ಅಭಿಮಾನಿಗಳು ಯಾರೂ ಆತಂಕಕ್ಕೆ ಒಳಗಾಗಬೇಡಿಯೆಂದು ಸಿಎಂ ಅವರು ಧೈರ್ಯ ತುಂಬಿದ್ದಾರೆ. ಜೊತೆಗೆ ಸಿಎಂ ಈ ಹೇಳಿಕೆಯು ಬಿಜೆಪಿ ಪಾಳಯದಲ್ಲಿ ಅಚ್ಚರಿ ಹುಟ್ಟು ಹಾಕಿದೆ.