ಚಿಕ್ಕಮಗಳೂರು ಜಿಲ್ಲೆಯ ಕಡೂರು ಕ್ಷೇತ್ರದ JDS ಅಭ್ಯರ್ಥಿ ವೈಎಸ್ವಿ ದತ್ತಾ ವಿರುದ್ಧ 41 ಚೆಕ್ಬೌನ್ಸ್ ಕೇಸ್ಗಳು ದಾಖಲಾಗಿವೆ. ರಾಜ್ಯ, ಹೊರ ರಾಜ್ಯಗಳಲ್ಲಿ ದತ್ತಾ ವಿರುದ್ಧ 2014ರಿಂದ 2023ರವರೆಗೆ 41 ಚೆಕ್ಬೌನ್ಸ್ ಪ್ರಕರಣ ದಾಖಲಾಗಿದೆ.
ಚುನಾವಣಾಧಿಕಾರಿಗಳಿಗೆ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ 41 ಕೇಸ್ಗಳಿರುವ ಬಗ್ಗೆ ವೈಎಸ್ವಿ ದತ್ತಾ ಮಾಹಿತಿ ನೀಡಿದ್ದಾರೆ. ಹಾಗೂ ಶೃಂಗೇರಿ ಬಿಜೆಪಿ ಅಭ್ಯರ್ಥಿ ಜೀವರಾಜ್ ಬಳಿ 8 ಲಕ್ಷ ರೂ. ಸಾಲ ಸೇರಿಸಿ ಒಟ್ಟು 93.19 ಲಕ್ಷ ರೂ. ಸಾಲ ಮಾಡಿರುವುದಾಗಿ ಪ್ರಮಾಣ ಪತ್ರದಲ್ಲಿ ತಿಳಿಸಿದ್ದಾರೆ.