ಕೂಗು ನಿಮ್ಮದು ಧ್ವನಿ ನಮ್ಮದು

ಧೈರ್ಯವಾಗಿ ಕಾಲೇಜಿಗೆ ಬನ್ನಿ ಕಲಿಕೆಗೆ ಗಮನಹರಿಸಿ: ಕೆ. ಗೋಪಾಲಯ್ಯ

ಬೆಂಗಳೂರು: ಅಬಕಾರಿ ಸಚಿವರು ಮತ್ತು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಇವತ್ತು ಜಿಲ್ಲೆಯ ಶಾಂತಿ ಗ್ರಾಮ ಪದವಿ ಪೂರ್ವ ಕಾಲೇಜಿಗೆ ಭೇಟಿ ನೀಡಿ ಕೋರೊನಾ ಸುರಕ್ಷತಾ ಕ್ರಮಗಳು ಹಾಗೂ ಬೋಧನಾ ವ್ಯವಸ್ಥೆಗಳನ್ನು ಪರಿಶೀಲಿಸಿದ್ರು.

ಪಸ್ಟ್ ಪಿ.ಯು.ಸಿ ಮತ್ತು ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳೊಂದಿಗೆ ಮಾತನಾಡಿದ ಕೆ.ಗೋಪಾಲಯ್ಯ ಎಲ್ಲರು ಧೈರ್ಯವಾಗಿ ಕಾಲೇಜಿಗೆ ಬನ್ನಿ ಕಲಿಕೆ ಬಗ್ಗೆ ಗಮನ ಹರಿಸಿ, ಜಿಲ್ಲಾಡಳಿತ ಮತ್ತು ಸರ್ಕಾರ ವಿದ್ಯಾರ್ಥಿಗಳ ಆರೋಗ್ಯ ಸುರಕ್ಷತೆಯ ಬಗ್ಗೆ ಕಾಳಜಿ ವಹಿಸಲಿದೆ. ಜ್ವರ ಮತ್ತು ಆರೋಗ್ಯ ಸಮಸ್ಯೆ ಕಂಡು ಬಂದಲ್ಲಿ ತಕ್ಷಣ ಉಪನ್ಯಾಸಕರ ಗಮನಕ್ಕೆ ತರುವಂತೆ ಕೆ.ಗೋಪಾಲಯ್ಯ ಹೇಳಿದ್ರು.

ಕಾಲೇಜಿನಲ್ಲಿ ಪ್ರತಿ ನಿತ್ಯ ಎಲ್ಲಾ ವಿದ್ಯಾರ್ಥಿಗಳಿಗೆ ಕೋರೊನಾ ಸ್ಕ್ರೀನಿಂಗ್ ಮಾಡಿ, ಸೋಂಕು ಹಾಗೂ ಸುರಕ್ಷತಾ ಕ್ರಮಗಳ ಬಗ್ಗೆ ತಿಳುವಳಿಕೆ ನೀಡಿ, ಅನಾರೋಗ್ಯದ ಲಕ್ಷಣಗಳು ಕಂಡು ಬಂದ್ರೆ ತಕ್ಷಣವೇ ವೈದ್ಯಕೀಯ ತಪಾಸಣೆಗೆ ಒಳಪಡಿಸಿ ಎಂದು ಪ್ರಾಂಶುಪಾಲರು ಹಾಗೂ ಉಪನ್ಯಾಸಕರಿಗೆ ಕೆ.ಗೋಪಾಲಯ್ಯ ಸೂಚನೆ ನೀಡಿದ್ರು.

ಶಾಸಕರಾದ ಸಿ.ಎನ್. ಬಾಲಕೃಷ್ಣ, ವಿಧಾನ ಪರಿಷತ್ ಸದಸ್ಯ ಎಂ.ಎ ಗೋಪಾಲಸ್ವಾಮಿ ಸಚಿವರ ಆಪ್ತ ಕಾರ್ಯದರ್ಶಿ ಕಾಂತರಾಜ್ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳು ಉಪಸ್ಥತರಿದ್ದರು.

error: Content is protected !!