ಕೂಗು ನಿಮ್ಮದು ಧ್ವನಿ ನಮ್ಮದು

ಸ್ವಂತ ಮನೆ ಇರಲಿ, ಬಾಡಿಗೆ ಮನೆ ಇರಲಿ ಕರಾರುಪತ್ರ ಬೇಕು ಕೆ.ಜೆ.ಜಾರ್ಜ್

ರಾಜ್ಯದಲ್ಲಿ ಗೃಹಜ್ಯೋತಿ ಯೋಜನೆ ಜಾರಿ ವಿಚಾರಕ್ಕೆ ಸಂಬಂಧಿಸಿ ಬೆಂಗಳೂರಿನಲ್ಲಿ ಇಂಧನ ಖಾತೆ ಸಚಿವ ಕೆ.ಜೆ.ಜಾರ್ಜ್ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ಸ್ವಂತ ಮನೆ ಇರಲಿ, ಬಾಡಿಗೆ ಮನೆ ಇರಲಿ ಕರಾರುಪತ್ರ ಬೇಕು. 200 ಯೂನಿಟ್ಗಿಂತ ಕಡಿಮೆ ಬಳಕೆದಾರರು 2.16 ಕೋಟಿ ಇದ್ದಾರೆ.

ಗೃಹಜ್ಯೋತಿ ಯೋಜನೆ ಲಾಭ ಪಡೆಯಲು ಸೇವಾಸಿಂಧು ಆ್ಯಪ್ನಲ್ಲಿ ಜನ ಅರ್ಜಿ ಹಾಕಬೇಕು. ಜುಲೈ ತಿಂಗಳಿನ ಬಿಲ್ ಆಗಸ್ಟ್ನಲ್ಲಿ ಪಾವತಿ ಮಾಡುವುದು ಬೇಡ. 2 ಲಕ್ಷ ಗ್ರಾಹಕರು ಮಾತ್ರ 200 ಯೂನಿಟ್ಗಿಂತ ಹೆಚ್ಚಾಗಿ ಬಳಕೆ ಮಾಡ್ತಾರೆ. 2 ಕೋಟಿ 14 ಲಕ್ಷ ಗ್ರಾಹಕರಿಗೆ ಈ ಯೋಜನೆ ಲಾಭ ಸಿಗುತ್ತದೆ ಎಂದು ಬೆಂಗಳೂರಿನಲ್ಲಿ ಇಂಧನ ಖಾತೆ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ.

error: Content is protected !!