ಕೂಗು ನಿಮ್ಮದು ಧ್ವನಿ ನಮ್ಮದು

ನಮ್ಮ ಸರ್ಕಾರದ ಅವಧಿಯಲ್ಲಿ ವಿದ್ಯುತ್ ದರ ಏರಿಕೆ ಮಾಡಿಲ್ಲ, ಅದು ಹಿಂದಿನ ಸರ್ಕಾರದ ನಿರ್ಧಾರ -ಕೆಜೆ ಜಾರ್ಜ್

ನಮ್ಮ ಸರ್ಕಾರದ ಅವಧಿಯಲ್ಲಿ ವಿದ್ಯುತ್ ದರ ಏರಿಕೆ ಮಾಡಿಲ್ಲ. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ದರ ಏರಿಕೆಯಾಗಿತ್ತು. ಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ಜಾರಿಗೆ ಬಂದಿರಲಿಲ್ಲ ಎಂದು ಬೆಂಗಳೂರಿನಲ್ಲಿ ಇಂಧನ ಇಲಾಖೆ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ.

ಚುನಾವಣೆ ಮುಗಿದ ನಂತರ ಇಂದಿನ ಸರ್ಕಾರದ ವಿದ್ಯುತ್ ದರ ಏರಿಕೆ ಆದೇಶ ಜಾರಿಗೆ ಬಂದಿದೆ. ನಮ್ಮ ಸರ್ಕಾರದ ಅವಧಿಯಲ್ಲಿ ವಿದ್ಯುತ್ ದರ ಹೆಚ್ಚಳ ಮಾಡಿಲ್ಲ. ನಮ್ಮ ಸರ್ಕಾರದ ಬಡವರು, ಮಧ್ಯಮ ವರ್ಗದವರನ್ನು ರಕ್ಷಿಸುತ್ತಿದೆ. ಬಡವರು ಬಿಲ್ ಕಟ್ಟುವುದೇ ಬೇಡ ಎಂದು ಗೃಹಜ್ಯೋತಿ ಯೋಜನೆ ಜಾರಿ ಮಾಡಿದ್ದೇವೆ ಎಂದರು.

error: Content is protected !!